ಮಡಿಕೇರಿ ನ.21 : ವಿದ್ಯಾರ್ಥಿ ಜೀವನದಿಂದಲೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಮತ್ತು ಗ್ರಂಥಾಲಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಕರೆ ನೀಡಿದ್ದಾರೆ.
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕಾರ್ಯಪ್ಪ ಕಾಲೇಜ್ ನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಮೂಲಕ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು. ಓದುವ ಹವ್ಯಾಸ ಜ್ಞಾನವನ್ನು ಹೆಚ್ಚಿಸುತ್ತದೆ, ಮಾತ್ರವಲ್ಲದೆ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ದಿನಪತ್ರಿಕೆ ಮತ್ತು ಸ್ಪರ್ಧಾತ್ಮಕ ಪುಸ್ತಕಗಳನ್ನು ಓದಿ ಅಧ್ಯಯನ ಮಾಡಿದರೆ ಪದವಿ ಹಂತವನ್ನು ಮುಗಿಸಿದ ತಕ್ಷಣ ಸರಕಾರಿ ಉದ್ಯೋಗವನ್ನು ಪಡೆಯಲು ಅನುಕೂಲವಾಗುತ್ತದೆ. ಮಾಹಿತಿ ಮತ್ತು ತಂತ್ರಜ್ಞಾನ ಕೈ ಬೆರಳಿನಲ್ಲಿದ್ದರೂ ಪುಸ್ತಕವನ್ನು ಕೈಯಲ್ಲಿಡಿದು ಓದುವ ಅನುಭವವೇ ಶ್ರೇಷ್ಠವಾದದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳುವಂತೆ ಪ್ರೊ.ರಾಘವ ಕರೆ ನೀಡಿದರು.
ಕಾಲೇಜ್ ನ ಗ್ರಂಥಪಾಲಕಿ ಡಾ.ಸಿ.ವಿಜಯಲತಾ ಮಾತನಾಡಿ, ವರ್ಷಂಪ್ರತಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಆಚರಿಸಲಾಗುತ್ತದೆ. ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೂಲಕ ಉಪನ್ಯಾಸ, ಪುಸ್ತಕ ಪ್ರದರ್ಶನ, ಪ್ರಬಂಧ ಸ್ಪರ್ಧೆಯನ್ನು ಕಾಲೇಜ್ ನಲ್ಲಿ ಆಯೋಜಿಸಲಾಗುತ್ತದೆ. ಈ ಬಾರಿ ಪುಸ್ತಕ ಪ್ರದರ್ಶನ ಮಾಡಲಾಗಿದೆ, ವಿದ್ಯಾರ್ಥಿಗಳು ಪುಸ್ತಕ ಓದುವ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಐಕ್ಯೂಎಸಿ ಸಂಯೋಜಕ ಡಾ.ರಾಜೇಂದ್ರ, ಕನ್ನಡ ವಿಭಾಗದ ಅಧ್ಯಾಪಕ ಡಾ.ಎನ್.ವಿ.ಕರುಣಾಕರ, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜು ಗ್ರಂಥಾಲಯ ವಿಭಾಗದ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿ, ಚಂದ್ರಾವತಿ ಪ್ರಾರ್ಥಿಸಿ, ಲಿಖಿತ ವಂದಿಸಿದರು.
Breaking News
- *ಕರಾಟೆ ಸ್ಪರ್ಧೆ : ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ಸಂಚಾರಿ ನಿಯಮ ಉಲ್ಲಂಘನೆ, ಮದ್ಯಪಾನ ಮಾಡಿ ವಾಹನ ಚಾಲನೆ : ಲೈಸೆನ್ಸ್ ರದ್ದು*
- *ಬಾಳುಗೋಡು : ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
- *ಕಾರುಗುಂದದಲ್ಲಿ ಮದ್ಯವರ್ಜನ ಶಿಬಿರ : ಮದ್ಯ ತ್ಯಜಿಸಿ ಉತ್ತಮ ಜೀವನ ನಡೆಸಿ : ಶಿವಕುಮಾರ್ ಸಲಹೆ*
- *ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಚೇರಂಬಾಣೆ : ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ*
- *ಕುಂಜಿಲ ಆಕ್ಸ್ ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ರಚನೆ*
- *ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸನ್ಮಾನ*
- *ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ*
- *ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ*