ಮಡಿಕೇರಿ ನ.22 : ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ನ.23 ರಂದು ನಿರಂತರ ಕಲಿಕಾ ಕಾಯಾ೯ಗಾರ ಮತ್ತು ಔಷಧಿ ಕ್ಷೇತ್ರದಲ್ಲಿನ ಪ್ರಸಕ್ತ ವಿದ್ಯಮಾನಗಳ ಕುರಿತಂತೆ ವಿಚಾರಗೋಷ್ಠಿ ನಡೆಯಲಿದೆ.
ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ ನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ತಿಳಿಸಿದ್ದಾರೆ.
ವಿಚಾರಗೋಷ್ಟಿಯಲ್ಲಿ ಮೈಸೂರು ವೖತ್ತದ ಉಪಔಷಧ ನಿಯಂತ್ರಕ ಬಿ.ಪಿ. ಅರುಣ್, ಕೊಡಗು ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕ ಗುರುನಾಥ್ ಮಾಗಣಗೇರಿ, ಜಿಲ್ಲಾ ಕಾಮಿ೯ಕ ಅಧಿಕಾರಿ ಎಸ್.ಎಲ್.ಹಷ೯ವಧ೯ನ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ. ಅನಿಲ್ ಧವನ್, ಕೊಡಗು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಆನಂದ್, ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಕಾನೂನು ಸಲಹೆಗಾರಕೆ.ಹರೀಶ್ , ಸಂಘದ ಜಿಲ್ಲಾ ಗೌರವ ಕಾಯ೯ದಶಿ೯ ಡಿ.ಐ. ಪುರುಷೋತ್ತಮ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ಜೀವನ್ ಮಾಹಿತಿ ನೀಡಿದ್ದಾರೆ.





































