Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕರಿಕೆ : ಸಹಕಾರ ಸಂಘದಿಂದ ರೈತರ ಆರ್ಥಿಕತೆ ವೃದ್ಧಿ : ಎ.ಕೆ.ಮನು ಮುತ್ತಪ್ಪ*
Uncategorized

*ಕರಿಕೆ : ಸಹಕಾರ ಸಂಘದಿಂದ ರೈತರ ಆರ್ಥಿಕತೆ ವೃದ್ಧಿ : ಎ.ಕೆ.ಮನು ಮುತ್ತಪ್ಪ*

November 23, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.23 : ಒಂದು ಗ್ರಾಮದಲ್ಲಿ ಒಂದು ಸಹಕಾರ ಸಂಘ ಸ್ಥಾಪನೆಯಾಗಬೇಕೆಂಬುದು ಸರ್ಕಾರದ ಆಶಯವಾಗಿದ್ದು, ಆ ಮೂಲಕ ಸ್ಥಳೀಯ ರೈತರಿಗೆ ಗೊಬ್ಬರ, ಉತ್ಪನ್ನಗಳಿಗೆ ಗೋದಾಮು, ಶಿಕ್ಷಣ ನೀಡುವಂತಹ ಕಾರ್ಯಗಳನ್ನು ಕೈಗೊಂಡು ರೈತರ ಆರ್ಥಿಕತೆಯನ್ನು ವೃದ್ಧಿಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಕರಿಕೆ ಸಹಕಾರ ಸಂಘದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕರಿಕೆ ಸಹಕಾರ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳ’ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದೆ ಕೊಡಗು ಜಿಲ್ಲೆಯ ಕರಿಕೆ ಭಾಗದಲ್ಲಿ ಅಪ್ಪಿಕೊ ಚಳುವಳಿಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕರಿಕೆ ಪ್ಯಾಕ್ಸ್‍ನ ಸಣ್ಣ ಕೊಠಡಿಯಲ್ಲಿ ಉಳಿದುಕೊಂಡು ಚಳುವಳಿಯಲ್ಲಿ ಭಾಗವಹಿಸಿದ ಘಟನೆಯನ್ನು ನೆನೆಯುತ್ತಾ ಇಂದು ಪ್ಯಾಕ್ಸ್ ಉತ್ತಮ ಕಟ್ಟಡ ನಿರ್ಮಾಣ ಮಾಡಿದ್ದು, ಸ್ಥಳೀಯ ಉತ್ಪನ್ನಗಳ ಖರೀದಿಯಂತಹ ಮಹಾತ್ಕಾರ್ಯವನ್ನು ಕೈಗೊಳ್ಳುತ್ತಾ ಉತ್ತಮವಾಗಿ ಬೆಳೆಯುತ್ತಿದೆ. ಒಂದು ಗ್ರಾಮದಲ್ಲಿ ಒಂದು ಸಹಕಾರ ಸಂಘ ಸ್ಥಾಪನೆಯಾಗಬೇಕೆಂಬುದು ಸರ್ಕಾರದ ಆಶಯವಾಗಿದ್ದು ಆ ಮೂಲಕ ಸ್ಥಳೀಯ ರೈತರಿಗೆ ಗೊಬ್ಬರ, ಉತ್ಪನ್ನಗಳಿಗೆ ಗೋದಾಮು, ಶಿಕ್ಷಣ ನೀಡುವಂತಹ ಕಾರ್ಯಗಳನ್ನು ಕೈಗೊಂಡು ರೈತರ ಆರ್ಥಿಕತೆಯನ್ನು ವೃದ್ಧಿಗೊಳಿಸಲು ಪ್ರಯತ್ನಿಸುತ್ತಿದೆ. ಈ ಮೂಲಕ ದೇಶದ ಆರ್ಥಿಕತೆಯನ್ನು ವೃದ್ಧಿಗೊಳಿಸಬಹುದೆಂಬ ಚಿಂತನೆಯೊಂದಿಗೆ 5 ಟ್ರಿಲಿಯನ್ ಡಾಲರ್‍ಗೆ ದೇಶದ ಆರ್ಥಿಕತೆಯನ್ನು ಕೊಂಡೊಯ್ಯಬೇಕೆನ್ನುವ ಉದ್ದೇಶದೊಂದಿಗೆ ಸಹಕಾರ ಕ್ಷೇತ್ರದ ಮೂಲಕ ಈ ಸಾಧನೆಯನ್ನು ಕೈಗೊಳ್ಳಬಹುದೆಂದು ಚಿಂತಿಸಿ ಯೋಜನೆ ರೂಪಿಸಲಾಗಿದೆ ಎಂದರು.

ಈ ದಿಸೆಯಲ್ಲಿಯೇ 12 ಅಂಶಗಳ ಯೋಜನೆಯನ್ನು ಜಾರಿಗೊಳಿಸಿದ್ದು, ಸಹಕಾರ ಸಂಘಗಳು, ಜನೌಷಧಿ ಕೇಂದ್ರ ಸ್ಥಾಪನೆ, ಪೆಟ್ರೋಲ್ ಬಂಕ್ / ಚಾರ್ಚಿಂಗ್ ಘಟಕ, ಕುಡಿಯುವ ನೀರಿನ ಘಟಕ, ಗೋದಾಮು ನಿರ್ಮಾಣ ಇತ್ಯಾದಿ ಯೋಜನೆಗಳನ್ನು ಕೈಗೊಳ್ಳುವಂತೆ ಪ್ರೇರೇಪಿಸಲಾಗುತ್ತಿದೆ. ಸಹಕಾರ ಕ್ಷೇತ್ರಕ್ಕೆ 119 ವರ್ಷಗಳ ಇತಿಹಾಸವಿದ್ದು, ಅನೇಕ ಹಿರಿಯ ಸಹಕಾರಿಗಳ ತ್ಯಾಗ, ನಿಸ್ವಾರ್ಥ ಸೇವೆ, ಉತ್ತಮ ಆಡಳಿತದ ಫಲವಾಗಿ ಇದೆಲ್ಲಾ ಸಾಧಿಸಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕರಿಕೆ ಗ್ರಾ.ಪಂ ಅಧ್ಯಕ್ಷ ಬಾಲಚಂದ್ರ ನಾಯರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆ ಉತ್ತಮವಾಗಿದ್ದು, ಎಲ್ಲಾ ಕ್ಷೇತ್ರಕ್ಕೂ ಸಂಘಗಳ ಕಾರ್ಯವ್ಯಾಪ್ತಿ ಹಬ್ಬಿದೆ. ಕ್ಯಾಂಪ್ಕೋ, ಮ್ಯಾಂಮ್ಕೋ, ನಂದಿನಿ, ಅಮೂಲ್ ಇತ್ಯಾದಿ ಬ್ರಾಂಡ್‍ಗಳೇ ಇದಕ್ಕೆ ಸಾಕ್ಷಿಯಾಗಿದ್ದು ಸಂಘಗಳು ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಎಚ್.ಜೆ.ಸತೀಶ್ ಕುಮಾರ್ ಮಾತನಾಡಿ, ಇಂಗ್ಲೆಂಡ್‍ನಲ್ಲಿ ಪ್ರಪ್ರಥಮ ಸಹಕಾರ ಸಂಘ ಪ್ರಾರಂಭವಾದ ನಂತರದಲ್ಲಿ ಭಾರತದಲ್ಲಿ 1905 ರಲ್ಲಿ ಗದಗ್ ಜಿಲ್ಲೆಯಲ್ಲಿ ಸ್ಥಾಪನೆಯಾಯಿತು. ತದನಂತರದಲ್ಲಿ ಕೊಡಗು ಜಿಲ್ಲೆಯಲ್ಲಿ ಕೇವಲ 12 ದಿನಗಳ ಅಂತರದಲ್ಲಿ ತಲ್ತರೆ ಶೆಟ್ಟಳ್ಳಿಯಲ್ಲಿ ಪತ್ತಿನ ಸಹಕಾರ ಸಂಘ ಸ್ಥಾಪನೆಯಾಯಿತು. ನಂತರದಲ್ಲಿ ಭಾಗಮಂಡಲ ಪ್ಯಾಕ್ಸ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ, ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘ, ಜೇನು ಬೆಳೆಗಾರರ ಸಹಕಾರ ಸಂಘ, ಹೀಗೆ ಹಲವು ಸಂಘಗಳು ಇಂದು ಶತಮಾನೋತ್ಸವವನ್ನು ಕಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಅಂದಿನ ಕಾಲದಲ್ಲಿ ಸಹಕಾರಿಗಳ ದೂರದೃಷ್ಟಿಯ ಫಲವಾಗಿ ಸ್ಥಳಿಯವಾಗಿ ಬೆಳೆಯುವಂತಹ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ದೊರಕಿಸುವ ಉದ್ದೇಶದೊಂದಿಗೆ ಹಲವು ಸಂಘಗಳು ಪ್ರಾರಂಭವಾದವು. ಇಂದು ಪ್ಯಾಕ್ಸ್, ಪತ್ತಿನ ಸಹಕಾರ ಸಂಘಗಳು ವಾಣಿಜ್ಯ ಬ್ಯಾಂಕ್‍ಗಳಿಗೆ ಪೈಪೋಟಿಯನ್ನು ನೀಡುತ್ತಿದ್ದು, ಸಂಘಗಳ ತ್ವರಿತ ಕಾರ್ಯನಿರ್ವಹಣೆಯು ಶ್ಲಾಘನಾರ್ಹ ಎಂದರು.

ರಾಜ್ಯದಲ್ಲಿಯೇ ಹಲವು ವಿಧದ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಸಹಕಾರ ಆಸ್ಪತ್ರೆ, ಸಹಕಾರ ಸಾರಿಗೆ, ಸಹಕಾರ ಸೂಪರ್ ಮಾರ್ಕೆಟ್ ಇತ್ಯಾದಿ ಎಲ್ಲಾ ರಂಗಗಳಲ್ಲೂ ಸಹಕಾರ ಕ್ಷೇತ್ರ ವ್ಯಾಪಿಸಿದೆ ಎಂದು ಹೇಳಿದರು.

ಅಂತೆಯೇ ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ರೈತರಿಗೆ ಪಿಕ್‍ಅಪ್ ವಾಹನ ಖರೀದಿಗೆ, ಶಿಕ್ಷಣ ಪಡೆಯಲು ಸಾಲ ನೀಡುವಂತಹ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಲಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ ಪ್ರಗತಿ ಹೊಂದುತ್ತಿದೆ ಎಂದು ಹೇಳಿದರು.

ಸಂಘದ ಮಾಜಿ ಅಧ್ಯಕ್ಷರುಗಳಾದ ಬೇಕಲ್ ಸಿ.ಜಯರಾಮ, ಕೋಡಿ ಕೆ.ಪೊನ್ನಪ್ಪ, ಕೋಡಿ ಕೆ.ಸೀತಾರಾಮ, ಎಸ್.ವೆಂಕಪ್ಪಗೌಡ, ಬಿ.ಪಿ. ನಿರ್ಮಲಾನಂದ, ಎಚ್.ಎ.ಹರೀಶ, ಕೆ.ಬಿ.ರಾಘವ, ಬಿ.ಎ.ನಾರಾಯಣ, ಪಿ.ಟಿ.ಐಸಾಕ್, ಪಿ.ಎಂ.ನಂಜುಂಡ, ಬೇಕಲ್ ಡಿ.ದೇವರಾಜ, ಕೆ.ಪಿ.ರಘುರಾಮ, ಬೇಕಲ್ ಜೆ.ಶರಣ್ ಕುಮಾರ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗಾಧರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರಿಕೆ ಪ್ಯಾಕ್ಸ್ ಅಧ್ಯಕ್ಷ ಬೇಕಲ್ ದೇವರಾಜ್, ಕರಿಕೆ ಪ್ಯಾಕ್ಸ್ ಬೆಳೆದು ಬಂದ ದಾರಿಯ ಕುರಿತು ಸಂಘದ ಮುಂದಿನ ಯೋಜನೆಗಳು, ಸಂಘವು ಮೇಲೆ ಹೇಳಿದಂತೆ ಪೆಟ್ರೋಲ್ ಬಂಕ್ ನಿರ್ಮಾಣ, ಜನೌಷಧಿ ಕೇಂದ್ರ ಸ್ಥಾಪನೆಯಂತಹ ಯೋಜನೆ ರೂಪಿಸುತ್ತಿದೆ ಎಂದು ಹೇಳಿದರು. ಅಲ್ಲದೆ ಈಗಾಗಲೇ ಕ್ಯಾಂಪ್ಕೋದ ಸಂಯುಕ್ತಾಶ್ರಯದಲ್ಲಿ ಸಂಘದಲ್ಲಿ ಅಡಿಕೆ ಖರೀದಿ ಘಟಕವನ್ನು ಸಹ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.
ದಿನದ ಮಹತ್ವದ ಕುರಿತು ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ. ಶ್ಯಾಮಲಾ ಉಪನ್ಯಾಸ ನೀಡಿದರು.
ಸಪ್ತಾಹದ ಅಂಗವಾಗಿ ಮೇರಿ ಬಾಪ್ಟಿಸ್ ಆಯುರ್ವೇದ ಆಸ್ಪತ್ರೆಯಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ವೇದಿಕೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎನ್.ಎ.ರವಿ ಬಸಪ್ಪ, ಕೆ.ಎಸ್.ಗಣಪತಿ, ಕೆ.ಎಂ.ತಮ್ಮಯ್ಯ, ಸಹಕಾರ ಅಭಿವೃದ್ಧಿ ಅಧಿಕಾರಿ ಪಿ.ಬಿ.ಮೋಹನ್, ಕರಿಕೆ ಪ್ಯಾಕ್ಸ್‍ನ ಉಪಾಧ್ಯಕ್ಷ ಎಂ.ಎಂ.ರೆಲ್ಸನ್ ಹಾಜರಿದ್ದರು.

ಕಾರ್ಯಕ್ರಮದ ಪ್ರಾರ್ಥನೆಯನ್ನು ಸಂಘದ ನಿರ್ದೇಶಕರುಗಳಾದ ಧನ್ಯಶ್ರೀ ಕುಮಾರ್ ಹಾಗೂ ಕೆ.ಪಿ. ಸರಸ್ವತಿ ನೆರವೇರಿಸಿದರು. ನಿರೂಪಣೆಯನ್ನು ಯೂನಿಯನ್‍ನ ವ್ಯವಸ್ಥಾಪಕಿ ಆರ್.ಮಂಜುಳ ನಿರೂಪಿಸಿದರು. ಕಾರ್ಯಕ್ರಮ ನಿರ್ವಹಣೆಗೆ ಯೂನಿಯನ್ ಸಿಬ್ಬಂದಿಗಳು ಹಾಗೂ ಪ್ಯಾಕ್ಸ್‍ನ ಸಿಬ್ಬಂದಿಗಳು ಸಹಕರಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ನ.30 ರಂದು ಕನಕದಾಸರ ಜಯಂತಿ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*
Next Article *ಮಡಿಕೇರಿಯಲ್ಲಿ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ಸಭೆ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.