Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ಸಭೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ಸಭೆ*

November 23, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.23 : ಸಂಘಟಿತರಾಗುವುದರಿಂದ ಅಗತ್ಯ ಸೌಲಭ್ಯಗಳನ್ನು ಸಹಕಾರಿಯಾಗುವುದಲ್ಲದೇ, ಬಹುಕಾಲದ ಬೇಡಿಕೆಗಳ ಈಡೇರಿಕೆ ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಭಿಮತ ವ್ಯಕ್ತಪಡಿಸಿದರು.
ನಗರದ ಮೈತ್ರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೊಡಗಿನಿಂದ ಹೆಚ್ಚಿನ ಪೊಲೀಸ್ ಅಧಿಕಾರಿಗಳು ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ಬಳಿಕ ಪೊಲೀಸರು ಸುಗಮ ಜೀವನ ನಡೆಸವಂತಾಗಬೇಕು. ಸರಕಾರದ ಸೌಲಭ್ಯಸುಲಭವಾಗಿ ದೊರೆಯಬೇಕಾದರೆ ಸಂಘಟನಾತ್ಮಕ ಚಟುವಟಿಕೆ ಮುಖ್ಯವಾಗಿತ್ತದೆ. ಸಂಘ ಉತ್ತಮವಾಗಿ ಮುನ್ನಡೆಯುತ್ತಿದೆ ಎಂದು ಶ್ಲಾಘಿಸಿದ ಅವರು, ಸಂಘದ ಚಟುವಟಿಕೆಗೆ ಪೂರಕ ಸಹಕಾರ ನೀಡುತ್ತೇನೆ. ಮೈತ್ರಿ ಭವನ ದುರಸ್ತಿ ಕಾರ್ಯಕ್ಕೆ ಶೀಘ್ರದಲ್ಲಿ ಮುಂದಾಗಲಾಗುವುದು. ಇದರಿಂದ ಆರ್ಥಿಕ ಕ್ರೋಡಿಕರಣಕ್ಕೆ ಸಹಕಾರಿಯಾಗಲಿದೆ ಎಂದರು.
ಧ್ವಜ ದಿನಾಚರಣೆಯಡಿ ಸಂಗ್ರಹಿಸಿದ ಶುಲ್ಕ ಕಳೆದ ಬಾರಿಗಿಂತ ಶೇ.50ರಷ್ಟು ಹೆಚ್ಚಿದೆ. ಜಿಲ್ಲಾ ಪೊಲೀಸ್ ಇಲಾಖೆಗೂ ನಿವೃತ್ತ ಪೊಲೀಸರ ಮಾರ್ಗದರ್ಶನವಿದೆ. ಕಾಲಕಾಲಕ್ಕೆ ಸರಿಯಾದ ಸಲಹೆ ನೀಡುತ್ತ ವೃತ್ತಿಯಲ್ಲಿರುವ ಪೊಲೀಸರನ್ನು ಜಾಗೃತಗೊಳಿಸುತ್ತಿದ್ದಾರೆ. ನಿವೃತ್ತ ಪೊಲೀಸರಿಗೆ ವಿಮೆ ಯೋಜನೆ ಜಾರಿ ಸಂಬಂಧ ಸರಕಾರದ ಗಮನ ಸೆಳೆಯಬೇಕು ಎಂದು ಸಲಹೆ ನೀಡಿದರು.
ಸಂಘದ ಗೌರವಾಧ್ಯಕ್ಷ ಎಂ.ಎ.ಅಪ್ಪಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ನಿವೃತ್ತ ಪೊಲೀಸರ ಹಿತಕ್ಕಾಗಿ ಸಂಘ ಸ್ಥಾಪನೆಯಾಗಿತು. ಇದೀಗ ನಿವೃತ್ತರು ಸಂಘಟಿತರಾಗಿದ್ದಾರೆ. ನಮ್ಮ ಹಕ್ಕಿಗಾಗಿ ಹೋರಾಡಿದ ಫಲ ಸವಲತ್ತುಗಳು ದೊರೆಯುತ್ತವೆ. ಪೊಲೀಸ್ ಇಲಾಖೆಯಲ್ಲಿರುವ ಎಲ್ಲಾ ಹಂತದ ಸಿಬ್ಬಂದಿಗಳಿಗೆ ಗೌರವ ದೊರಕಬೇಕೆಂಬುದು ನಮ್ಮ ಉದ್ದೇಶವಾಗಿದೆ. ಪೊಲೀಸ್ ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ವಲಯಗಳ ಪ್ರಮುಖರು ಸಂಘದ ಶ್ರೇಯೋಭಿವೃದ್ಧಿಗೆ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು.
ಯೋಧ ಮೇಜರ್ ಪಾಲೆಕಂಡ ಅತುಲ್ ಅವರ ಪತ್ನಿ ಪಾಲೆಕಂಡ ಶೈಲಾ ಚಿಣ್ಣಪ್ಪ ಮಾತನಾಡಿ, ಸಂಕಷ್ಟದ ನಡುವೆಯೂ ಪೊಲೀಸರು ಜನಸೇವೆ ಮಾಡುತ್ತಿದ್ದಾರೆ. ಪೊಲೀಸರು ಕುಟುಂಬಕ್ಕೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುವುದಿಲ್ಲ. ಕುಟುಂಬ, ವೈಯಕ್ತಿಕ ಬದುಕನ್ನು ಮುಡಿಪಾಗಿಟ್ಟು ಸೇವೆ ಸಲ್ಲಿಸುವ ಪೊಲೀಸರಿಗೆ ನಿವೃತ್ತಿ ಬಳಿಕ ಸೂಕ್ತ ಗೌರವ, ಸಮಾಜದಲ್ಲಿ ಉತ್ತಮ ಸ್ಥಾನಮಾನ ದೊರಕುವಂತಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಕೆ.ಉತ್ತಪ್ಪ, ಸಂಘದಲ್ಲಿ 900ಕ್ಕೂ ಹೆಚ್ಚು ಸದಸ್ಯರಿದ್ದು, ಭಾಗವಹಿಸುವಿಕೆ ಕಡಿಮೆ ಇದೆ. ಸಂಘ ಬೆಳ್ಳಿಹಬ್ಬ ಸಂಭ್ರಮಕ್ಕೆ ಕಾಲಿಡುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಕೋರಿದರು.
ಸಂಘದ ಹಿರಿಯ ಸದಸ್ಯರುಗಳಾದ ಕುಪ್ಪಂಡ ಕುಶಾಲಪ್ಪ, ಟಿ.ಎಂ.ಮಂದಣ್ಣ, ಕೆ.ಕೆ.ರಾಜು, ಹೆಚ್.ಕೆ.ತಿಮ್ಮಯ್ಯ, ಕೆ.ಕೆ.ಮಂದಪ್ಪ, ಪಾರ್ವತಿ, ಬಿ.ಕೆ.ಶಾಂಭಾ, ಮಾದಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಅಗಲಿದ ಸದಸ್ಯರಿಗೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ನಿವೃತ್ತ ಎಡಿಜಿಪಿ ದಿ.ಸುಬ್ಬಯ್ಯ ಅವರ ಪತ್ನಿ ಸುಮತಿ ಸುಬ್ಬಯ್ಯ, ಸಂಘದ ಕಾರ್ಯದರ್ಶಿ ಎಂ.ಅಚ್ಚುತ್ತನ್ ನಾಯರ್, ಖಜಾಂಚಿ ಭೀಮಯ್ಯ, ಉಪಾಧ್ಯಕ್ಷ ಬಿ.ಆರ್.ಲಿಂಗಪ್ಪ, ನಿರ್ದೇಶಕರುಗಳಾದ ಎಂ.ಕೆ.ಕಾವೇರಪ್ಪ, ಎ.ಸಿ.ಚರ್ಮಣ, ಭೀಮಯ್ಯ, ರಾಮರಾಸ್, ಪರಶಿವ, ಕೆ.ಎಂ.ಸುಬ್ರಮಣಿ, ಸಿ.ಟಿ.ಚೀಯಣ್ಣ, ಐ.ಸಿ.ಗಣಪತಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಹರಿಶ್ಚಂದ್ರ ಪ್ರಾರ್ಥಿಸಿದರು. ಎಂ.ಕೆ.ಉತ್ತಪ್ಪ ಸ್ವಾಗತಿಸಿದರು, ಬಿ.ಆರ್.ಲಿಂಗಪ್ಪ ನಿರೂಪಿಸಿ, ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕರಿಕೆ : ಸಹಕಾರ ಸಂಘದಿಂದ ರೈತರ ಆರ್ಥಿಕತೆ ವೃದ್ಧಿ : ಎ.ಕೆ.ಮನು ಮುತ್ತಪ್ಪ*
Next Article *ಕೊಡಗು ಜಿಲ್ಲೆಗೆ 200 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆಗೆ ಆಮ್ ಆದ್ಮಿ ಪಾರ್ಟಿ ಒತ್ತಾಯ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.