ಮಡಿಕೇರಿ ನ.23 : ಬರ ಪರಿಹಾರವಾಗಿ ಕೊಡಗು ಜಿಲ್ಲೆಗೆ ರಾಜ್ಯ ಸರ್ಕಾರ 200 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಘಟಕ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಮಳೆಯ ಕೊರತೆಯಿಂದ ರಾಜ್ಯವ್ಯಾಪಿ ಬರದ ಛಾಯೆ ಮೂಡಿದೆ. ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರಪೀಡಿತವೆಂದು ಘೋಷಣೆಯಾಗಿದೆ. ಆದರೆ ಸರ್ಕಾರ ಬರ ಪರಿಹಾರ ನೀಡುವ ಕಾಳಜಿಯನ್ನು ತೋರುತ್ತಿಲ್ಲವೆಂದು ಟೀಕಿಸಿದ್ದಾರೆ.
ಸಕಾಲದಲ್ಲಿ ಮಳೆ ಬಾರದೆ ಭತ್ತದ ಕೃಷಿಗೆ ಹಿನ್ನಡೆಯಾಗಿದೆ, ಸೆಪ್ಟಂಬರ್ ತಿಂಗಳಿನಲ್ಲಿ ಸುರಿದ ಮಳೆಯಿಂದ ಕೃಷಿ ಫಸಲು ಮತ್ತು ಕಾಫಿ ನಷ್ಟವಾಗಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.30ರಷ್ಟು ಕಡಿಮೆ ಮಳೆಯಾಗಿದ್ದು, ಕೃಷಿಕ ವರ್ಗ ಆತಂಕಕ್ಕೆ ಒಳಗಾಗಿದೆ.
ರೈತರ ಒತ್ತಾಯದ ಹಿನ್ನೆಲೆ ರಾಜ್ಯ ಸರ್ಕಾರ ಕೊಡಗು ಜಿಲ್ಲೆಗೆ ಕೇವಲ 7.5ಕೋಟಿ ರೂ. ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿರುವ 2 ಲಕ್ಷಕ್ಕೂ ಅಧಿಕ ಕೃಷಿಕರಿಗೆ ಈ ಹಣವನ್ನು ಹಂಚಿಕೆ ಮಾಡಿದರೆ ತಲಾ 300 ರೂ. ಮಾತ್ರ ಬರ ಪರಿಹಾರ ಸಿಗುತ್ತದೆ. ಇದು ಹಸಿದ ಆನೆಗೆ ಅರೆಕಾಸಿನ ಮಜ್ಜಿಗೆಯಾದಂತ್ತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ ಅತಿವೃಷ್ಟಿಯಿಂದ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದರೂ ಕೇಂದ್ರ ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ. ಪ್ರಸ್ತುತ ಬರಗಾಲದಿಂದ ಜಿಲ್ಲೆಯ ರೈತರು ಸಂಕಷ್ಟವನ್ನು ಎದುರಿಸುತ್ತಿದ್ದು, ರಾಜ್ಯ ಸರ್ಕಾರ ನೆರವಿಗೆ ಬಾರದೆ ಇರುವ ಬಗ್ಗೆ ಬೇಸರಗೊಂಡಿದ್ದಾರೆ. ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ ನೋಡಿ ಅಸಮಾಧಾನಗೊಂಡಿದ್ದಾರೆ. ಆದರೆ ಜಿಲ್ಲೆಯ ಶಾಸಕರು, ಸಂಸದರು, ಉಸ್ತುವಾರಿ ಮಂತ್ರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನದಟ್ಟು ಮಾಡಿ ಹೆಚ್ಚಿನ ಪ್ರಮಾಣದ ಪರಿಹಾರಕ್ಕಾಗಿ ಒತ್ತಡ ಹಾಕುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ರೈತರ ಕೃಷಿ ಪಂಪ್ ಸೆಟ್‍ಗೆ ಗೆ ಟ್ರಾನ್ಸ್‍ಫರ್ಮರ್ ಅಳವಡಿಸಲು ನೀಡುತ್ತಿದ ಸಹಾಯಧನವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ ಹಾಗೂ ವಿದ್ಯುತ್ ದರದಲ್ಲಿ ಗಣನೀಯ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತ್ತಾಗಿದೆ. ಗೊಬ್ಬರ, ಕೃಷಿ ಪರಿಕರಗಳ ಬೆಲೆ ಮತ್ತು ಕಾರ್ಮಿಕರ ವೇತನ ಏರಿಕೆಯಾಗಿದೆ. ಕೃಷಿಯನ್ನೇ ನಂಬಿರುವ ಕೊಡಗಿನ ರೈತರು ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆ ಲಾಭದಾಯಕವಲ್ಲವೆಂದು ಸ್ಥಗಿತಗೊಳಿಸುವ ಸಾಧ್ಯತೆಗಳಿದೆ.
ಪರಿಸ್ಥಿತಿಯ ತೀವ್ರತೆಯನ್ನು ಅರಿತು ಜಿಲ್ಲೆಯ ಶಾಸಕರು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಬೇಕು. ತಮ್ಮದೇ ರಾಜ್ಯ ಸರ್ಕಾರದಿಂದ 200ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿರುವ ಭೋಜಣ್ಣ ಸೋಮಯ್ಯ, ತಪ್ಪಿದಲ್ಲಿ ಜಿಲ್ಲೆಯದ್ಯಂತ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*