ಮಡಿಕೇರಿ ನ.23 : ಜಿಲ್ಲೆಯಲ್ಲಿ ಮಕ್ಕಳಲ್ಲಿನ ರಕ್ತಹೀನತೆ ತಡೆಯುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಲವು ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ `ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಅಭಿಯಾನ’ ಕಾರ್ಯಕ್ರಮಕ್ಕೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 10,359 ಪದವಿ ಪೂರ್ವ ಕಾಲೇಜಿನ ಮಕ್ಕಳನ್ನು ಪ್ರಥಮ ಹಂತದಲ್ಲಿ ಪರೀಕ್ಷಿಸಿ, ರಕ್ತಹೀನತೆ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಅಗತ್ಯ ಮಾತ್ರೆ ಹಾಗೂ ಔಷಧಿಯನ್ನು ನಿಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಾಹಿತಿ ನೀಡಿದರು.
ಜಿಲ್ಲೆಯಾದ್ಯಾಂತ ಮೊದಲ ಹಂತವಾಗಿ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಮಕ್ಕಳ ರಕ್ತಹೀನತೆ ತಪಾಸಣೆಯನ್ನು ನಡೆಸಿ ಪೂರಕ ಮತ್ತು ಚಿಕಿತ್ಸಾತ್ಮಕವಾಗಿ ಐಎಫ್‍ಎ-ಪಿಂಕ್ ಮತ್ತು ಬ್ಲೂ ಮಾತ್ರೆಗಳನ್ನು ನೀಡಿ ಎಲ್ಲಾ ಮಕ್ಕಳನ್ನು ಅನೀಮಿಯಾ ತಡೆಯುವ ಉದ್ದೇಶದಿಂದ ಆರೋಗ್ಯ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಅನೀಮಿಯದಿಂದಾಗುವ ಸುಸ್ತು, ಬೆಳವಣಿಗೆಯಲ್ಲಿ ಕುಂಠಿತ, ಮೈ, ಕೈ ನೋವು ಮೊದಲಾದ ಸಮಸ್ಯೆಗಳನ್ನು ಬಗೆಹರಿಸಲು ರಕ್ತ ಪರೀಕ್ಷೆ ಮಾಡಲಾಗುವುದು. ತೊಂದರೆ ಕಂಡುಬಂದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಔಷಧಗಳನ್ನು ನೀಡಿ ಪರಿಶೀಲಿಸಿ ಗುಣಮುಖರನ್ನಾಗಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹೇಳಿದರು.
ಹಾಗೆಯೇ ತಂತ್ರಜ್ಞಾನದ ಸಹಾಯ ಪಡೆದುಕೊಂಡು ಸ್ವಾಸ್ತ್ಯ ಕಿರಣ ಆ್ಯಪ್ ಮೂಲಕ ಕಾಯಿಲೆಗೆ ಒಳಪಟ್ಟ ವಿದ್ಯಾರ್ಥಿಗಳ ದಾಖಲೆಗಳನ್ನು ಶೇಖರಿಸಿ ಅನುಸರಿಸಲಾಗುವುದು. ಕಾಲೇಜು ಹಂತದಲ್ಲಿ ಅಲ್ಲದೆ ಅಂಗನವಾಡಿಯಿಂದ ಎಲ್ಲಾ ಹಂತದ ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಗುವುದು ಎಂದರು. ಆಶಾ ಕಾರ್ಯಕರ್ತೆಯರ ಸಹಯೋಗದೊಂದಿಗೆ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಅಭಿಯಾನವನ್ನು ಯಶಸ್ವಿಗೊಳಿಸುತ್ತೇವೆ ಎಂದರು.
ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ ಮಾತನಾಡಿ ಶೇ.70 ಕಾಯಿಲೆಯೂ ನೀರು ಮತ್ತು ಕಲುಷಿತ ಆಹಾರದಿಂದ ಬರುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆಯತ್ತ ಗಮನಹರಿಸಬೇಕು ಎಂದರು.
ಪಾದುಕೆಗಳನ್ನು ಧರಿಸದಿದ್ದರೆ ಕಾಯಿಲೆಗೆ ಒಳಗಾಗುವ ಸಾಧ್ಯತೆ ಬಹಳಷ್ಟು ಇದ್ದು, ಪ್ರತಿಯೊಬ್ಬರೂ ಪಾದುಕೆ ಧರಿಸಬೇಕು. ಆಹಾರ ಸೇವಿಸುವ ಮುನ್ನ ಕೈ ತೊಳೆಯುವ ಅಭ್ಯಾಸವು ಕಾಯಿಲೆಯಿಂದ ಪಾರು ಮಾಡುತ್ತದೆ. ಪೌಷ್ಟಿಕ ಆಹಾರದೊಂದಿಗೆ ವೈಯಕ್ತಿಕ ಸ್ವಚ್ಛತೆ ಬಹಳ ಮುಖ್ಯವಾಗಿದೆ ಎಂದು ಸಲಹೆ ನೀಡಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಅವರು ಮಾತನಾಡಿ ಆಶಾ ಕಾರ್ಯಕರ್ತೆಯ ಸೇವೆ ಮಹತ್ವದ್ದು. ಪ್ರತಿಯೊಂದು ಹಳ್ಳಿಹಳ್ಳಿಗೂ ಭೇಟಿ ನೀಡಿ ಜಾಗೃತಿ ಮೂಡಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಹೆಚ್ಚಿನದ್ದಾಗಿದೆ ಎಂದರು.
ವಿದ್ಯಾರ್ಥಿಗಳು ತಮ್ಮ ಮುಂದಿನ ಒಳ್ಳೆಯ ಭವಿಷ್ಯಕ್ಕಾಗಿ ಆರೋಗ್ಯ ತಪಾಸಣೆ ಕೈಗೊಳ್ಳುವುದು ಮುಖ್ಯ. ಹಾಗೆಯೇ ಅತಿ ಹೆಚ್ಚು ವಿದ್ಯಾರ್ಥಿಗಳು ಮಧ್ಯಾಹ್ನದ ಆಹಾರ ಸೇವಿಸದೆ ಹಲವಾರು ಮಾರಕ ರೋಗಗಳಿಗೆ ತುತ್ತಾಗುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು ಶಾಶ್ವತವಾಗುವ ಸಾಧ್ಯತೆ ಇದ್ದು, ಅದನ್ನು ಹೋಗಲಾಡಿಸಲು ವಿದ್ಯಾರ್ಥಿಗಳು ಗಮನ ಹರಿಸಬೇಕಿದೆ. ವಿದ್ಯಾರ್ಥಿಗಳಲ್ಲಿ ಶಿಸ್ತು ಬದ್ಧ ಜೀವನದೊಂದಿಗೆ ಆರೋಗ್ಯವಾಗಿರುವುದು ಕೂಡ ಮುಖ್ಯವಾಗಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಪುಟ್ಟರಾಜು ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ರಕ್ತಹೀನತೆ ಕುರಿತಂತೆ ಜಾಗೃತಿ ಮೂಡಿಸುವುದು ಅತ್ಯಗತ್ಯ. ಸರ್ಕಾರ ವಿದ್ಯಾರ್ಥಿಗಳಿಗಾಗಿ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಆರೋಗ್ಯ ಇಲಾಖೆಯವರೊಂದಿಗೆ ಶಿಕ್ಷಣ ಇಲಾಖೆಯವರು ಕೈಜೋಡಿಸಿ ಅಭಿಯಾನ ಯಶಸ್ವಿಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಆರ್.ಸಿ.ಎಚ್ ಅಧಿಕಾರಿ ಡಾ.ಮಧುಸೂದನ್, ಶಾಲಾ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣಪ್ಪ, ತಾಲೂಕು ಆರೋಗ್ಯ ಅಧಿಕಾರಿ ಡಾ.ಚೇತನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಎನ್‍ಎಚ್‍ಎಂ ವಿಭಾಗದ ಅಧಿಕಾರಿಗಳು ಆಶಾ ಕಾರ್ಯಕರ್ತರು ಮತ್ತಿತರರು ಇದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*