ಪುತ್ತೂರು ನ.23 : ರಾಜ್ಯ ಮಟ್ಟದ ಜೂನಿಯರ್ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್ರಾಮ್ ಜಗದೀಶ್ ಭಂಡಾರಿ ಕಂಚಿನ ಪದಕ ಗೆದ್ದಿದ್ದಾರೆ.
ಕರ್ನಾಟಕ ರಾಜ್ಯ ವೆಯ್ಟ್ ಲಿಫ್ಟಿಂಗ್ ಅಸೋಸಿಯೇಶನ್ನ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್ರಾಮ್ 67ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ.
ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ಇವರ ಪುತ್ರ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.
Breaking News
- *ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ : ಅಧ್ಯಕ್ಷರಾಗಿ ಬೊಳ್ಳಜಿರ ಅಯ್ಯಪ್ಪ ಅಧಿಕಾರ ಸ್ವೀಕಾರ*
- *ವಿಜ್ರಂಭಣೆಯ ದಸರಾ ಆಚರಣೆಗೆ ಸಿದ್ಧತೆ : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಾನ ಆದ್ಯತೆ : ಶಾಸಕ ಡಾ.ಮಂತರ್ ಗೌಡ*
- *ಶೋಭಾಯಾತ್ರೆಯಲ್ಲಿ ವಿಜ್ರಂಭಿಸಿದ ಶಾಂತಿನಿಕೇತನದ ಶ್ರೀಮಹಾಗಣಪ*
- *ಶಾಸಕ ಡಾ.ಮಂತರ್ ಗೌಡ ಮಡಿಕೇರಿ ನಗರ ಸಂಚಾರ : ದಸರಾದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*
- *ಉತ್ತಮ ಕಾರ್ಯನಿರ್ವಹಣೆಗಾಗಿ ಮದೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ*
- *ಆರ್.ಅಶೋಕ್ ವಿರುದ್ಧ ಕೊಡಗು ಐಎನ್ಟಿಯುಸಿ ಅಸಮಾಧಾನ*
- *ಡಿಸಿಸಿ ಬ್ಯಾಂಕ್ ನ 99 ನೇ ವಾರ್ಷಿಕ ಮಹಾಸಭೆ : ಕೃಷಿಕರಿಗೆ 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ : ರೂ.7.91 ಕೋಟಿ ಲಾಭ*
- *ಶ್ರೀಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ*
- *ಗೆಜ್ಜೆ ಹಣಕೋಡು : ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ*
- *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ*