ಮಡಿಕೇರಿ ನ.23 : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಕೂಸಿನ ಮನೆಯೂ ಕೂಡ ಒಂದಾಗಿದೆ. ಮಕ್ಕಳ ಪಾಲನೆ ಮತ್ತು ಪೋಷಣೆ ಅತ್ಯಂತ ಸೂಕ್ಷ್ಮವಾಗಿದ್ದು, ಸೂಕ್ತ ರೀತಿಯಲ್ಲಿ ತರಬೇತಿ ಪಡೆದುಕೊಳ್ಳುವಂತೆ ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ.
ಕೂಡಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿನ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆರಂಭಗೊಂಡ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳ ಕೇರ್ ಟೇಕರ್ಸ್ ಸೇವಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಾತ್ಮಗಾಂಧಿ ನರೇಗಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಮನರೇಗಾ ಕೂಲಿಕಾರರ ಮಕ್ಕಳಿಗೂ ಸೂಕ್ತ ಪಾಲನೆ ಮತ್ತು ಪೋಷಣೆ ಒದಗಿಸುವ ನಿಟ್ಟಿನಲ್ಲಿ ಕೂಸಿನ ಮನೆಗಳನ್ನು ಆರಂಭಿಸಲಾಗಿದೆ. ಮಹಿಳಾ ಕೂಲಿಕಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಮತ್ತು ಮಹಿಳಾ ಸಬಲೀಕರಣದ ಭಾಗವಾಗಿ ಕೂಸಿನ ಮನೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಕೇರ್ ಟೇಕರ್ಸ್ ಗಳಿಗೆ ತರಬೇತಿ ನಡೆಯುತ್ತಿದ್ದು, ಜಿಲ್ಲೆಯಲ್ಲಿಯೂ 2 ತಂಡಗಳಲ್ಲಿ 14 ದಿನಗಳ ಕಾಲ ತರಬೇತಿ ನಡೆಯಲಿದೆ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳು ವಿವರಿಸುವ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸದುಪಯೋಗ ಪಡಿಸಿಕೊಳ್ಳುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದರು.
ಜಿ.ಪಂ. ಉಪಕಾರ್ಯದರ್ಶಿ ಧನರಾಜು ಅವರು ಮಾತನಾಡಿದರು. ಸೋಮವಾರಪೇಟೆ ತಾ.ಪಂ.ಇಒ ಜಯಣ್ಣ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ರಾಕೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋμï, ಸಂಪನ್ಮೂಲ ವ್ಯಕ್ತಿಗಳಾದ ಸಾವಿತ್ರವ್ವ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸವಿತಾ, ಸಹಾಯಕ ಜಿಲ್ಲಾ ಕಾರ್ಯಕ್ರಮಾಧಿಕಾರಿ ಮಹೇಂದ್ರ, ತಾಂತ್ರಿಕ ಸಂಯೋಜಕರಾದ ರಂಜಿತ್, ತಾಲೂಕು ಐಇಸಿ ಸಂಯೋಜಕರಾದ ನರೇಂದ್ರ ಇತರರು ಇದ್ದರು.
Breaking News
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*