ಮಡಿಕೇರಿ ನ.23 : ಕೃಷಿಕರು ಸರ್ಕಾರದ ಸೌಲಭ್ಯವನ್ನು ಪಡೆಯಲು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಆಧಾರ್ ಕಾರ್ಡ್ ಜೊತೆಗೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿದೆ. ಆ ನಿಟ್ಟಿನಲ್ಲಿ ರೈತರು ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಜಿಲ್ಲೆಯಲ್ಲಿ 3,26,776 ಅದರಲ್ಲಿ 1,47,621 ಮಂದಿ ಫ್ರೂಟ್ಸ್ ತಂತ್ರಂಶದಲ್ಲಿ ಹೆಸರು ನೋಂದಾಯಿಸಿದ್ದಾರೆ. ಉಳಿದಂತೆ 1,29, 976 ಮಂದಿ ಫ್ರೂಟ್ಸ್ ತಂತ್ರಾಂಶದಡಿ ಹೆಸರು ನೋಂದಾಯಿಸಬೇಕಿದೆ.
Farmer Registration and Unified Beneficiary Information System-fruits ಸರ್ಕಾರದ ವತಿಯಿಂದ ಅಭಿವೃದ್ದಿಗೊಳಿಸಲಾಗಿದ್ದು, ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಬಯಸುವ ಎಲ್ಲಾ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ರೈತರು ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಗುರುತಿನ ಸಂಖ್ಯೆ (ಎಫ್ಐಡಿ) ಪಡೆಯಬಹುದು ಎಂದು ಹೇಳಿದರು.
ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕಂದಾಯ ಇಲಾಖೆ ಮತ್ತು ಇತರೆ ಸಂಬಂಧಿಸಿದ ಇಲಾಖೆಗಳಿಂದ ದೊರೆಯುವ ಸಹಾಯಧನ ಸೌಲಭ್ಯ ಪಡೆಯಲು ಮತ್ತು ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಸಾಲ, ಬೆಳೆ ಹಾನಿ ಪರಿಹಾರ, ಬ್ಯಾಂಕ್ ಸಾಲ ಪಡೆಯಲು ಹಾಗೂ ಇತರೆ ಯೋಜನೆಗಳಿಗೆ ಫ್ರೂಟ್ಸ್ ತಂತ್ರಾಂಶದಲ್ಲಿರುವ ವಿವರಗಳನ್ನು ಬಳಸಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ ಭೂಮಿ ತಂತ್ರಾಂಶದಲ್ಲಿ ಒಟ್ಟು ಸೇರ್ಪಡೆಯಾಗಿರುವ ತಾಕು ಸಂಖ್ಯೆ 3,26,776. ಸರ್ಕಾರದ ಅಧೀನದಲ್ಲಿರುವ ಹಾಗೂ ಕೃಷಿಯೇತರ ಭೂಮಿಗಳು(ಎನ್.ಎ) ಹಾಗೂ ಇತರೆ ತಾಕುಗಳನ್ನು ಹೊರತುಪಡಿಸಿ ಫ್ರೂಟ್ಸ್ ತಂತ್ರಾಂಶದಲ್ಲಿ ಸೇರ್ಪಡೆಗೊಳಿಸಬೇಕಾಗಿರುವ ತಾಕುಗಳ ಒಟ್ಟು ಸಂಖ್ಯೆ 2,69,901. ಈಗಾಗಲೇ 1,47,621 ತಾಕುಗಳು ಸೇರ್ಪಡೆಗೊಂಡಿದ್ದು, ಫ್ರೂಟ್ಸ್ ತಂತ್ರಾಂಶದಲ್ಲಿ 1,29,976 ಸರ್ವೇ ನಂಬರ್ಗಳು ಸೇರ್ಪಡೆಯಾಗಲು ಬಾಕಿ ಇದೆ ಎಂದು ವೆಂಕಟ್ ರಾಜಾ ವಿವರಿಸಿದರು.
ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ ಎಫ್ಐಡಿ ಗೆ ಸೇರಿಸಲು ಮತ್ತು ಯಾವ ರೈತರು ಇಲ್ಲಿಯವರೆಗೆ ಎಫ್ಐಡಿ ಯನ್ನು ಮಾಡಿಸಿಕೊಂಡಿಲ್ಲವೋ ಅವರು ತಮ್ಮ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಪಶು ಸಂಗೋಪನಾ ಇಲಾಖೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.
ಎಫ್ಐಡಿ ಯನ್ನು ಮಾಡಿಸಲು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನುಗಳ ಪಹಣಿ ಪ್ರತಿಗಳು, ರೈತರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ತಮ್ಮ ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ (ಪರಿಶಿಷ್ಟ ವರ್ಗದ ರೈತರಿಗೆ ಕಡ್ಡಾಯ) ಪಾಸ್ಪೋರ್ಟ್ ಅಳತೆಯ ಒಂದು ಭಾವಚಿತ್ರ. ದಾಖಲಾತಿಗಳು ಅವಶ್ಯವಾಗಿದೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ, ಸಹಾಯಕ ನಿರ್ದೇಶಕರಾದ ಗೌರಿ ಇದ್ದರು.
Breaking News
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*