ನಾಪೋಕ್ಲು ನ.25 : ಮಡಿಕೇರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಎಂಬ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಿತು.
ಮಡಿಕೇರಿ ಆರೋಗ್ಯ ಇಲಾಖೆಯ ಆರ್.ಬಿ.ಎಸ್.ಕೆ ತಂಡ ವಿದ್ಯಾರ್ಥಿಗಳಿಗೆ ರಕ್ತ ಪರೀಕ್ಷೆಯನ್ನು ನಡೆಸಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಹಿಮೋಗ್ಲೋಬಿನ್ ಅಂಶ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಮಾತ್ರೆಗಳನ್ನು ನೀಡಿ ಅವರ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಸಂದರ್ಭ ಮಡಿಕೇರಿ ಆರೋಗ್ಯ ಇಲಾಖೆಯ ಡಾ.ಪೂಜಾ ಹಾಗೂ ಡಾ.ಲಾವಣ್ಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ವರದಿ : ದುಗ್ಗಳ ಸದಾನಂದ