ಮಡಿಕೇರಿ ನ.25 : ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ವೈ.ಯು.ಕಾವ್ಯ ರಾಷ್ಟ್ರ ಮಟ್ಟದ ಫುಟ್‍ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾಳೆ.
ಇವಳು 14 ವರ್ಷ ವಯೋಮಿತಿಯ ಬಾಲಕಿಯರ ಫುಟ್‍ಬಾಲ್ ಕ್ರೀಡೆಯಲ್ಲಿ ನಾಯಕಿಯಾಗಿ ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ್ದು, ಮಂಗಳೂರಿನ ಬಜ್ಪೆಯಲ್ಲಿ ನಡೆದ ವಿಭಾಗ ಮಟ್ಟದ ಕ್ರೀಡೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗದ ತಂಡದಲ್ಲಿ ಸ್ಥಾನ ಗಳಿಸಿದ್ದಾಳೆ. ಅಲ್ಲದೇ ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ರಾಜ್ಯ ಮಟ್ಟದ ಕ್ರಿಡೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
ಕಾವ್ಯ ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿಯಾಗಿದ್ದು, ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಬಿ.ಎಲ್.ಸಂದೇಶ್ ತರಬೇತಿ ನೀಡಿದ್ದಾರೆ. ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಎಸ್.ಡಿ.ಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದನೆ ಸಲ್ಲಿಸಿದ್ದಾರೆ.




































