ಕುಶಾಲನಗರ ನ. 25 : ಕುಶಾಲನಗರದ ಗೌಡ ಸಮಾಜ ಮತ್ತು ಗೌಡ ಯುವಕ ಸಂಘ, ಗೌಡ ಮಹಿಳಾ ಸ್ವಸಹಾಯ ಸಂಘ, ಪದ್ಮಾವತಿ ಗೌಡ ಮಹಿಳಾ ಒಕ್ಕೂಟ, ಗೌಡ ನಿವೃತ್ತ ಸೈನಿಕರ ಕೂಟ ಹಾಗೂ ಗೌಡ ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ ನ.27 ರಂದು ಪುತ್ತರಿ ಆಚರಣೆ ಸಂಭ್ರಮದಿಂದ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ತಿಳಿಸಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಬ್ಬದ ಆಚರಣೆ ಬಗ್ಗೆ ಮಾಹಿತಿ ನೀಡಿದ ಅವರು, ಅಂದು ಸಂಜೆ ಕುಶಾಲನಗರ ಗೌಡ ಸಮಾಜದಲ್ಲಿ ಸೇರಿ 7.45ಕ್ಕೆ ದೇವರಿಗೆ ಪೂಜೆ ಸಲ್ಲಿಸಿ ನೆರೆಕಟ್ಟಿ ಮೆರವಣಿಗೆಯಲ್ಲಿ ಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವುದರೊಂದಿಗೆ ಗುಮ್ಮನಕೊಲ್ಲಿಯಲ್ಲಿ ಗೌಡ ಯುವಕ ಸಂಘದ ಗದ್ದೆಯಲ್ಲಿ ರಾತ್ರಿ 8.45 ಕ್ಕೆ ಗದ್ದೆಗೆ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕದಿರು ತೆಗೆದು ಜನಾಂಗದವರಿಗೆ, ಸಾರ್ವಜನಿಕರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.
ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮಾತನಾಡಿ, ನಾಲ್ಕು ಗದ್ದೆಗಳಲ್ಲಿ ಕದಿರು ಬೆಳೆಯಲಾಗಿದ್ದು ಸಾರ್ವಜನಿಕರು ನೂಕುನುಗ್ಗಲಿಲ್ಲದೆ ಕದಿರು ಪಡೆದುಕೊಳ್ಳಲು ಅವಕಾಶವಿದೆ ಎಂದರು.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಸೆಟ್ಟೆಜನ ದೊರೆ ಗಣಪತಿ, ಕಾರ್ಯದರ್ಶಿ ಕುಲ್ಲಚನ ಹೇಮಂತ್, ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಸೂದನ ಲಲಿತಾ ಗಣೇಶ್, ಸಮಾಜದ ಸಹ ಕಾರ್ಯದರ್ಶಿ, ದಬ್ಬಡ್ಕ ಡಾಟಿ ಶಾಂತಕುಮಾರಿ ಉಪಸ್ಥಿತರಿದ್ದರು.
Breaking News
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*
- *ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
- *ಅರ್ಚಕರ ಮೇಲೆ ಹಲ್ಲೆ : ಹೋರಾಟದ ಎಚ್ಚರಿಕೆ ನೀಡಿದ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಘಟಕ*
- *ಫೆ.7 ರ ಪಾದಯಾತ್ರೆಗೆ ಸಿಎನ್ಸಿ ಬೆಂಬಲ*
- *ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
- *ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಟ್ ಬಿಡುಗಡೆ*
- *ಕೊಡಗಿಗೆ ಸಚಿವ ಸ್ಥಾನ ನೀಡಲು ಒತ್ತಾಯ*
- *ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
- *ತಲಕಾವೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ : ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ : ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ*