ಮಡಿಕೇರಿ ನ.27 : ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ನ.28 ರಿಂದ 30ರ ವರೆಗೆ ನಡೆಯಲಿದೆ.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ವೆಂಕಟ್‍ರಾಜಾ ಉದ್ಘಾಟಿಸಲಿದ್ದಾರೆ.
ನ.30 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮೈಸೂರು, ದಕ್ಷಿಣ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ.ಬೋರಲಿಂಗಯ್ಯ ಪಾಲ್ಗೊಳ್ಳಲಿದ್ದಾರೆ.








