ಮಡಿಕೇರಿ ನ.27 ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಗ್ರ ಗಿರಿಜನ ಯೋಜನಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ‘ಗಿರಿಜನ ಉತ್ಸವ’ ಕಾರ್ಯಕ್ರಮವು ಡಿ. 1 ರಂದು ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ತಿತಿಮತಿ ಗ್ರಾ.ಪಂ. ಅಧ್ಯಕ್ಷರಾದ ಪಿ.ಎಸ್.ಪೊನ್ನು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣೀದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಸಮಗ್ರ ಗಿರಿಜನ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ಇತರರು ಪಾಲ್ಗೊಳ್ಳಲಿದ್ದಾರೆ.







