Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಿಎನ್‍ಸಿಯಿಂದ ಪುತ್ತರಿ ಸಂಭ್ರಮ : ವಿಶಿಷ್ಟ ಸಂಸ್ಕೃತಿಯನ್ನು ಉಳಿಸಲು ಕೊಡವ ಲ್ಯಾಂಡ್ ಅನಿವಾರ್ಯ : ಎನ್.ಯು.ನಾಚಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಿಎನ್‍ಸಿಯಿಂದ ಪುತ್ತರಿ ಸಂಭ್ರಮ : ವಿಶಿಷ್ಟ ಸಂಸ್ಕೃತಿಯನ್ನು ಉಳಿಸಲು ಕೊಡವ ಲ್ಯಾಂಡ್ ಅನಿವಾರ್ಯ : ಎನ್.ಯು.ನಾಚಪ್ಪ

ನವೆಂಬರ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.27 : ವಿಶಿಷ್ಟ ಸಂಸ್ಕೃತಿಯ ಕೊಡವ ಜನಾಂಗದ ಪ್ರಧಾನ ಹಬ್ಬಗಳಲ್ಲಿ ಒಂದಾದ ಪುತ್ತರಿಯನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದಕ್ಷಿಣ ಕೊಡಗಿನ ಬಾಳೆಲೆ ಬಳಿಯ ಆರ್ಕೇರಿನಾಡಿನ ಬಿಳೂರು ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಿತು.
ಹುಣ್ಣಿಮೆಯ ದಿನವಾದ ಇಂದು ಬೆಳಗ್ಗೆ ಬಿಳೂರು ಗ್ರಾಮದ ಕಾಂಡೇರ ಸುರೇಶ್ ಅವರ ಭತ್ತದ ಗದ್ದೆಯಲ್ಲಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಾಂಪ್ರದಾಯಿಕವಾಗಿ ನವ ಧಾನ್ಯ ಭತ್ತದ ಕದಿರು ಕೊಯ್ಯುವ ಮೂಲಕ ಹಬ್ಬವನ್ನು ಅರ್ಥಪೂರ್ಣಗೊಳಿಸಿದರು.
ತೆನೆ ತುಂಬಿದ ಕದಿರುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಕೃತಿ ದೇವಿಗೆ ನಮಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿ ಪುತ್ತರಿಯ ಆಚಾರ, ವಿಚಾರಗಳನ್ನು ಆರಂಭಿಸಿದರು. ಕೊಯ್ದ ಕದಿರನ್ನು “ಪೊಲಿಯೇ ಬಾ, ಪೊಲಿ ಪೊಲಿಯೇ ಬಾ” ಎಂದು ಧಾನ್ಯಲಕ್ಷ್ಮಿಯನ್ನು ಘೋಷವಾಕ್ಯದ ಮೂಲಕ ಆಹ್ವಾನಿಸುತ್ತಾ ಮನೆ ತುಂಬಿಕೊಂಡರು. ನಂತರ ನವ ಧಾನ್ಯವನ್ನು ಪೂಜ್ಯಸ್ಥಾನದಲ್ಲಿಟ್ಟು ವಿಶೇಷ ಪೂಜೆ ಸಲ್ಲಿಸಿ ಕೊಡವ ಜನಾಂಗ ಹಾಗೂ ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸಿದರು.
ಸಿಎನ್‍ಸಿ ಸಂಘಟನೆ ಆಚರಿಸಿದ 30ನೇ ವರ್ಷದ ಸಾರ್ವತ್ರಿಕ ಪುತ್ತರಿ ಹಬ್ಬಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಾಕ್ಷಿಯಾದ ವಿರಾಟ್ ಹಿಂದೂಸ್ಥಾನ್ ಸಂಘಂನ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಕೊಡವ ಸಂಪ್ರದಾಯವನ್ನು ಕೊಂಡಾಡಿದರು.
ಅತ್ಯಂತ ಸೂಕ್ಷ್ಮ ಕೊಡವ ಜನಾಂಗದ ವಿಶಿಷ್ಟವಾದ ಸಂಸ್ಕೃತಿಯಯನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮಾತನಾಡಿ ಕೊಡವ ಜನಾಂಗದ ಎಲ್ಲಾ ಹಬ್ಬಗಳು ಮಾತೃ ಭೂಮಿ, ಪ್ರಕೃತಿ, ದೈವಿಕ ವಸಂತ ಕಾವೇರಿ, ವೀರತನ, ಬೇಟೆಯ ಕೌಶಲ್ಯ, ಜನಾಂಗೀಯ “ಸಂಸ್ಕಾರ ಗನ್ / ಆಯುಧ” ಮತ್ತು ಕೃಷಿ ಪ್ರವೃತ್ತಿಯ ಬದ್ಧತೆಗಳ ಸುತ್ತ ಸುತ್ತುತ್ತವೆ. ಕೊಡವರ ಹಬ್ಬಗಳು ಸೂರ್ಯ- ಚಂದ್ರರ ಮೂಲಕ ವಿಕಸನಗೊಂಡಿವೆ. ಕೊಡವ ಸಂಸ್ಕೃತಿಯಯಲ್ಲಿ ಅಥವಾ ಕೊಡವ ಹಬ್ಬಗಳನ್ನು ನಿರ್ಧರಿಸುವ ಸಂದರ್ಭ ಮೂಢನಂಬಿಕೆಗೆ ಅವಕಾಶವಿಲ್ಲ. ನಮ್ಮ ಗುರು, ಹಿರಿಯರು ಕೊಡವ ಜಾನಪದ ಪರಂಪರೆ, ಕಾನೂನು ವ್ಯವಸ್ಥೆಗಳು ಮತ್ತು ನಮ್ಮ ಆಚರಣೆಗಳನ್ನು ಬಹಳ ಹಿಂದೆಯೇ ರೂಪಿಸಿದ್ದಾರೆ. ಇದು ಪೀಳಿಗೆಯಿಂದ ಪೀಳಿಗೆಗೆ ರವಾನಿಸಲ್ಪಟ್ಟಿದೆ ಎಂದರು.
ಕೊಡವರಿಗೆ ಯಾವುದೇ ಧಾರ್ಮಿಕ ಕ್ರಿಯೆಯ ಏಜೆಂಟ್‍ಗಳ ಅಗತ್ಯವಿಲ್ಲ. ಕೊಡವರು ನೇರವಾಗಿ ಪ್ರಕೃತಿಯ ಚಕ್ರದ ಮೂಲಕ ಸರ್ವಶಕ್ತ ಮತ್ತು ದೈವಿಕತೆಯೊಂದಿಗೆ ಧಾರ್ಮಿಕ ಹಾಗೂ ಭಾವನಾತ್ಮಕ ಸಂಪರ್ಕವನ್ನು ಹೊಂದಿದ್ದಾರೆ. ನಮ್ಮ ಜನಪದ ಆಚರಣೆಗಳನ್ನು ನಾವೇ ನಿರ್ಧರಿಸುತ್ತೇವೆ. ಕೊಡವ ಜನಾಂಗೀಯ ಹಬ್ಬಗಳ ಕ್ಯಾಲೆಂಡರ್‍ನಲ್ಲಿ ಪುತ್ತರಿ ಹಬ್ಬವು ಪ್ರಧಾನ ಹಬ್ಬವಾಗಿದೆ. ಪುತ್ತರಿ ಎಂಬುವುದು ತಮಿಳು ಕ್ಯಾಲೆಂಡರ್‍ನ ಪೊ0ಗಲ್ ಮತ್ತು ಸಿಖ್ಖರ ಬೈಸಾಕಿ ಇದ್ದಂತೆ.
ನವಧಾನ್ಯವನ್ನು ಶ್ರದ್ಧಾಭಕ್ತಿಯಿಂದ ಗದ್ದೆಯಿಂದ ತಂದು ಮನೆ ತುಂಬಿಸಿಕೊಳ್ಳುವ ಕೊಡವರ ಸಂಪ್ರದಾಯವೇ ಪುತ್ತರಿಯಾಗಿದ್ದು, ಇದು ಸಮೃದ್ಧಿಯ ಸಂಕೇತವಾಗಿದೆ. ನಮ್ಮ ವಿಶಿಷ್ಟ ಹಬ್ಬಗಳನ್ನು ಇಡೀ ವಿಶ್ವಕ್ಕೆ ತಿಳಿಸುವುದು ಮತ್ತು ಯುವಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕಳೆದ 3 ದಶಕಗಳಿಂದ ಸಿಎನ್‍ಸಿ ಸಂಘಟನೆ ಸಾರ್ವತ್ರಿಕವಾಗಿ ಪುತ್ತರಿಯನ್ನು ಆಚರಿಸಿಕೊಂಡು ಬರುತ್ತಿದೆ. ಕೊಡವ ಬುಡಕಟ್ಟು ಜನಾಂಗದ ಈ ವಿಶಿಷ್ಟ ಸಂಸ್ಕೃತಿ ಸೂರ್ಯ, ಚಂದ್ರರಷ್ಟೇ ಶಾಶ್ವತವಾಗಿದೆ. ಆದರೆ ಇದನ್ನು ಉಳಿಸಿ ಬೆಳೆಸಬೇಕಾದರೆ ಕೊಡವರಿಗೆ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತತ್ತೆಯ ಹಕ್ಕನ್ನು ನೀಡಲೇಬೇಕಾದ ಅನಿವಾರ್ಯತೆ ಇದೆ ಎಂದು ನಾಚಪ್ಪ ಹೇಳಿದರು.
ಕಾಂಡೇರ ಸುರೇಶ್, ಕಾಂಡೇರ ಲೇಖ ಸುರೇಶ್, ಕಾಂಡೇರ ಲವಿನ್ ಪೂಣಚ್ಚ, ಕಲಿಯಂಡ ಪ್ರಕಾಶ್, ಪಟ್ಟಮಾಡ ಕುಶ, ಮಂದಪಂಡ ಮನೋಜ್, ಅಲ್ಮಂಡ ನೆಹರು, ಅರೆಯಡ ಗಿರೀಶ್, ಚಂಬಂಡ ಜನತ್, ಅಪ್ಪೆಂಗಡ ಮಲೆ, ಕಿರಿಯಮಾಡ ಶೆರಿನ್, ಕಿರಿಯಮಾಡ ಶವಾನ್, ಅಜ್ಜಮಾಡ ಚಿಮ್ಮ, ಜಮ್ಮಡ ಮೋಹನ್, ಮದ್ರಿರ ಕರುಂಬಯ್ಯ, ಪುಲ್ಲಂಗಡ ದೇವಯ್ಯ, ಅದೇಂಗಡ ರಾಣಾ ಬೋಪಣ್ಣ, ಅದೇಂಗಡ ದಿನು ಮೇದಪ್ಪ, ಮಾಳೇಟಿರ ಪೊನ್ನಪ್ಪ, ಪುಟ್ಟಿಚಂಡ ಶಂಕರ್ ಮತ್ತಿತರರು ಪಾಲ್ಗೊಂಡು ಕೊಡಗಿನ ಸಮೃದ್ಧಿ ಮತ್ತು ಸಾಮರಸ್ಯಕ್ಕಾಗಿ ಪ್ರಾರ್ಥಿಸಿದರು.
ನೆರೆದಿದ್ದವರು ಪುತ್ತರಿ ಹಬ್ಬದ ಕೊಡವ ಸಾಂಪ್ರದಾಯಿಕ ಖಾದ್ಯಗಳನ್ನು ಸವಿದು ಸಂಭ್ರಮಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.