ಮಡಿಕೇರಿ ನ.27 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೋಮವಾರಪೇಟೆಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಗ್ರಾಮೀಣ ಪ್ರದೇಶಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ತಮ್ಮ ಅಹವಾಲುಗಳನ್ನು ಶಾಸಕರಿಗೆ ನೇರವಾಗಿ ಸಲ್ಲಿಸಿದರು. ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಶಾಸಕರು, ಸರಕಾರೀ ಮಟ್ಟದ ಮನವಿಗಳನ್ನು ಬಗೆಹರಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.







