ಮಡಿಕೇರಿ ನ.28 : ಧಾನ್ಯಲಕ್ಷ್ಮಿಯನ್ನು ಮನೆ ತುಂಬುವ ಕೊಡಗಿನ ವಿಶೇಷ ಹಬ್ಬವಾದ ಪುತ್ತರಿ ಹಬ್ಬವನ್ನು ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಗದ್ದೆಯಿಂದ ತಂದ ಕದಿರಿಗೆ ಹಾಗೂದೇವರಿಗೆ ಪೂಜೆ ಸಲ್ಲಿಸಿ, ನೆರದಿದ್ದವರಿಗೆ ಪ್ರಸಾದ ವಿತರಿಸಲಾಯಿತು. ನಂತರ ಸ್ಥಳೀಯರು ಸುತ್ತಮುತ್ತಲಿನ ಗ್ರಾಮಸ್ಥರು ಶ್ರೀ ಗೌರಿಶಂಕರ ಸನ್ನಿಧಿಯಲ್ಲಿ ನಡೆದ ಪುತ್ತರಿ ಆಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಹಬ್ಬದ ಆಚರಣೆಯ ನಂತರ ದೇವಾಲಯದ ಆವರಣದ ಸ್ವಚ್ಛತಾ ಕಾರ್ಯ ನಡೆಯಿತು.









