ಸೋಮವಾರಪೇಟೆ ನ.28 : ಸೋಮವಾರಪೇಟೆ ತಾಲ್ಲೂಕಿನ ಕಿರಗಂದೂರು ಸಮೀಪದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಮಕ್ಕಳ ಗುಡಿ ಬೆಟ್ಟಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿದರು.
ನೈಸರ್ಗಿಕ ಪ್ರಕೃತಿ ರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡ ಶಾಸಕರು, ಸ್ಥಳೀಯರಿಂದ ಅಲ್ಲಿನ ಮಾಹಿತಿ ಪಡೆದುಕೊಂಡರು. ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದೆ ಅಭಿವೃದ್ಧಿ ವಂಚಿತವಾಗಿರುವ ಈ ಪ್ರದೇಶಕ್ಕೆ ತುರ್ತಾಗಿ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ಉತ್ತಮ ಅವಕಾಶ ಇಲ್ಲಿ ಇದ್ದು, ವಿಶೇಷ ಗಮನ ಹರಿಸಿ ಮಕ್ಕಳ ಗುಡಿ ಬೆಟ್ಟದ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸುವುದಾಗಿ ಹೇಳಿದರು.
ಈ ಸಂದರ್ಭ ಗ್ರಾಮದ ಹಿರಿಯರಾದ ಎಸ್.ಎಂ.ಚಂಗಪ್ಪ ಹಾಗೂ ಗ್ರಾಮಸ್ಥರು ಹಾಜರಿದ್ದರು.