ಮಡಿಕೇರಿ ನ.28 : ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮೂಲಕ 28 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಡಿಕೇರಿಯ ಮೇಕೇರಿ ಸಮೀಪದ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಹೂಡಿರುವ ಅವರು ಕೊಡಗು ಜಿಲ್ಲಾ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರ ಜೊತೆ ಪಕ್ಷ ಸಂಘಟನೆ ಕುರಿತು ಸಮಾಲೋಚನೆ ನಡೆಸಿದರು. ಮುಂಬರುವ ಲೋಕಸಭಾ ಚುನಾವಣೆ ತಯಾರಿ, ನೂತನ ಜಿಲ್ಲಾಧ್ಯಕ್ಷರ ನೇಮಕ, ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಪಡೆದ ಮತಗಳು, ಹಾಲಿ ಶಾಸಕರ ಕಾರ್ಯವೈಖರಿ ಸಹಿತ ವಿವಿಧ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಕರ್ತರ ಸಭೆ ನಡೆಸಲು ಜಿಲ್ಲೆಗೆ ಬಂದಿದ್ದೇನೆ. ಪಕ್ಷ ಸಂಘಟನೆಯಲ್ಲಿ ಸ್ವಲ್ಪ ಕೊರತೆ ಇದೆ. ನಮ್ಮ ಶಕ್ತಿ ಕಡಿಮೆಯಾದ ಕಾರಣ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಾಗಬೇಕಿದೆ ಎಂದು ಹೇಳಿದರು.
ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರಿಗೆ ಅಸಮಾಧಾನವಿದ್ದು, ಮತ್ತೆ ಮೈತ್ರಿ ಸರ್ಕಾರ ಬರಬೇಕೆನ್ನುವ ನಿರೀಕ್ಷೆ ಜನರಲ್ಲಿದೆ ಎಂದರು.
ಕಾಂಗ್ರೇಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಹಲವು ದೋಷಗಳಿವೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮ ಮೆಚ್ಚತಕ್ಕ ವಿಚಾರ. ಜನರ ಸಮಸ್ಯೆಗಳ ಗ್ರೌಂಡ್ ರಿಯಾಲಿಟಿ ಸಿ.ಎಂ.ಗೆ ಅರ್ಥ ಆಗಿರಬಹುದು ಎಂದು ಹೇಳಿದರು.
ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದೆ. ಆ ವೇಳೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಎಲ್ಲಾ 28 ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಶ್ರಮವಹಿಸಲಿದೆ ಎಂದರು.
::: ಭ್ರೂಣ ಹತ್ಯೆ ಅಮಾನವೀಯ :::
ಮಂಡ್ಯದಲ್ಲಿ ನಡೆದ ಭ್ರೂಣ ಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರು, ಭ್ರೂಣ ಹತ್ಯೆ ಬಹಳ ಅಮಾನವೀಯ ಘಟನೆಯಾಗಿದೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಂಬೂರಿನಲ್ಲಿ ಇನ್ಫೋಸಿಸ್ ಮನೆ ಹಸ್ತಾಂತರ ವಿಳಂಬದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ನಮ್ಮ ಸರ್ಕಾರವಿದ್ದಾಗ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಿದ್ದೆವು. ನಂತರ ಬಂದ ಸರ್ಕಾರಗಳು ಸಂತ್ರಸ್ತರನ್ನು ನಿರ್ಲಕ್ಷ್ಯ ಮಾಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಸಚಿವ ಸಾ.ರಾ.ಮಹೇಶ್, ಪಿರಿಯಾಪಟ್ಟಣ ಮಾಜಿ ಶಾಸಕ ಕೆ.ಮಹದೇವು, ಮಡಿಕೇರಿ ನಗರಸಭಾ ಸದಸ್ಯ ಮುಸ್ತಫ, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ, ಪ್ರಮುಖರಾದ ಎಂ.ಎ.ಮನ್ಸೂರ್ ಅಲಿ, ಅಣ್ಣಾ ಶರೀಫ್, ಜಾಶೀರ್, ರವಿ ಕಿರಣ್ ಮತ್ತಿತ್ತರರು ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*