ಮಡಿಕೇರಿ ನ.28 : ಐತಿಹಾಸಿಕ ಹಿನ್ನೆಲೆ ಹೊಂದಿರುವ ನಗರದ ಕೋಟೆ ಆವರಣದಲ್ಲಿ ಮಡಿಕೇರಿ ಕೊಡವ ಸಮಾಜ, ಶ್ರೀ ಓಂಕಾರೇಶ್ವರ ದೇವಾಲಯ ಸಮಿತಿ ಮತ್ತು ಪಾಂಡೀರ ಕುಟುಂಬಸ್ಥರ ಸಂಯುಕ್ತ ಆಶ್ರಯದಲ್ಲಿ ಪುತ್ತರಿ ಕೋಲಾಟ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು, ಕೊಡವ ಸಮುದಾಯದ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು, ಯಾವುದೇ ಸಂಸ್ಕೃತಿ ನಶಿಸಿ ಹೋಗದಂತೆ ಎಚ್ಚರ ವಹಿಸಬೇಕೆಂದು ಹೇಳಿದರು.
ರಾಜ್ಯದಲ್ಲಿ ಸುಗ್ಗಿ ಹಬ್ಬದ ಮಾದರಿಯಲ್ಲೇ ಕೊಡಗು ಜಿಲ್ಲೆಯಲ್ಲಿ ಪುತ್ತರಿ ಕೋಲಾಟ ಅನಾದಿ ಕಾಲದಿಂದಲೇ ನಡೆದುಕೊಂಡು ಬರುತ್ತಿದೆ. ರಾಜವಂಶಸ್ಥರು ಅರಮನೆ ಮೈದಾನದಲ್ಲಿ ಪುತ್ತರಿ ಕೋಲಾಟ ನಡೆಸಿಕೊಂಡು ಬಂದಿದ್ದರು. ಕಾಲಾನಂತರ ಕೋಲಾಟವನ್ನು ಗದ್ದುಗೆ ಆವರಣಕ್ಕೆ ಸ್ಥಳಾಂತರವಾಗಿತ್ತು. ಆ ಬಳಿಕ ಕೊಡವ ಸಮಾಜ, ಕೊಡವ ಸಾಹಿತ್ಯ ಅಕಾಡೆಮಿಯ ಸಲಹೆಯಂತೆ ತಮ್ಮ ಅವಧಿಯಲ್ಲಿ ಮತ್ತೆ ಅರಮನೆ ಮೈದಾನಕ್ಕೆ ಸ್ಥಳಾಂತರ ಮಾಡಲಾಗಿದ್ದು, ಇದೀಗ ಹಲವು ವರ್ಷಗಳಿಂದ ಎಲ್ಲರ ಸಹಕಾರದಿಂದ ಕೋಲಾಟ ಯಶಸ್ವಿಯಾಗಿ ನಡೆಯುತ್ತಿದೆ. ಇಂತಹ ಪದ್ಧತಿ, ಪರಂಪರೆಗಳು, ಆಚಾರ ವಿಚಾರಗಳನ್ನು ನಶಿಸಲು ಬಿಡದೆ ಎಲ್ಲರೂ ಅದರ ಉಳಿವಿಗೆ ಪ್ರೋತ್ಸಾಹ ನೀಡಬೇಕೆಂದು ಬೋಪಯ್ಯ ಹೇಳಿದರು.
ಪಾಂಡೀರ ಕುಟುಂಬಸ್ಥರಿಂದ ಪ್ರಾರಂಭಿಕವಾಗಿ ಪುತ್ತರಿ ಕೋಲಾಟ ನಡೆಯಿತು. ಪಾಂಡೀರ ಕುಟುಂಬದ ಮಹಿಳಾ ಸದಸ್ಯರಿಂದ ನಡೆದ ಉಮ್ಮತ್ತಾಟ್, ತಾಲಿಪಾಟ್ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ದರಾಗಿ ವಿವಿಧ ನೃತ್ಯ ಪ್ರಕಾರಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಮಡಿಕೇರಿ ಕೊಡವ ಸಮಾಜದಿಂದ ಕೋಲಾಟ್, ಉಮ್ಮತ್ತಾಟ್, ಪರೆಯಕಳಿ ನಡೆಯಿತು. ಕಾರ್ಯಕ್ರಮದ ನಂತರ ಕೊಡಗಿನ ಸಾಂಪ್ರದಾಯಿಕ ವಾಲಗಕ್ಕೆ ನೆರೆದಿದ್ದವರು ಕುಣಿದು ಸಂಭ್ರಮಿಸಿದರು.
ಪಾಂಡೀರ ಕುಟುಂಬದ ಪಟ್ಟೆದಾರ ಪಾಂಡೀರ ಮೇದಪ್ಪ, ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ, ಶ್ರೀಓಂಕಾರೇಶ್ವರ ದೇವಾಲಯ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ರಮೇಶ್ ಹೊಳ್ಳ, ಕಾರ್ಯನಿರ್ವಹಣಾಧಿಕಾರಿ ದೇವರಾಜ್, ನಗರ ಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಪಾಂಡೀರ ವಿಜಯ, ಪಾಂಡೀರ ಮುತ್ತಣ್ಣ, ಸಜನ್ ಪೂಣಚ್ಚ, ಸಂತು ಸೇರಿದಂತೆ ಮಡಿಕೇರಿ ಕೊಡವ ಸಮಾಜದ ಆಡಳಿತ ಮಂಡಳಿ ಪದಾಧಿಕಾರಿಗಳು, ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಸದಸ್ಯರು, ವಿವಿಧ ಕೊಡವ ಕೇರಿಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Breaking News
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*