ನಾಪೋಕ್ಲು ನ.29 : ನಾಲ್ಕುನಾಡು ವ್ಯಾಪ್ತಿಯಲ್ಲಿ ಪುತ್ತರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಾಂಪ್ರದಾಯಿಕ ಆಚರಣೆಗಳೊಂದಿಗೆ, ಪಟಾಕಿ ಸದ್ದಿನೊಂದಿಗೆ ವಿವಿಧ ದೇವಾಲಯಗಳಲ್ಲಿ, ಐನ್ ಮನೆಗಳಲ್ಲಿ, ಕೊಡವ ಸಮಾಜಗಳಲ್ಲಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಮೀಪದ ಕಕ್ಕುಂದ ಕಾಡು ಶ್ರೀ ಕರಿಚಾಮುಂಡಿ ದೇವಸ್ಥಾನದಲ್ಲಿ ಭಕ್ತಾದಿಗಳು ಸೇರಿ ಪ್ರಾರ್ಥಿಸಿ ನಂತರ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಮಾಹಾ ಪೂಜೆಯೊಂದಿಗೆ ಕದಿರನ್ನು ಭಕ್ತಾದಿಗಳಿಗೆ ನೀಡಲಾಯಿತು.
ಅರ್ಚಕ ಸುದೀರ್ ಕೇಕುಣ್ಣಾಯ ಹಾಗೂ ತಕ್ಕ ಮುಖ್ಯಸ್ಥ ಸೂರ್ಯಕುಮರ್ , ದೇವಾಲಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಭಕ್ತಾಧಿಗಳು ಹಾಜರಿದ್ದರು.
ಪಾಲೂರು ಮಹಾಲಿಂಗೇಶ್ವರ ದೇವಾಲಯ, ಮಕ್ಕಿಶಾಸ್ತಾವು ದೇವಾಲಯ, ನಾಪೋಕ್ಲು ಕೊಡವ ಸಮಾಜಗಳಲ್ಲಿ ಹುತ್ತರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಮಕ್ಕಳು ಹಿರಿಯರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಹುತ್ತರಿಯ ಅಂಗವಾಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ವರದಿ : ದುಗ್ಗಳ ಸದಾನಂದ