ಕಾಗಿನೆಲೆ ನ.29 : ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ 536ನೇ ಶ್ರೀ ಕನಕ ಜಯಂತ್ಯೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರೇವಣಸಿದ್ದೇಶ್ವರ, ಶ್ರೀ ಬೀರಲಿಂಗೇಶ್ವರ, ಶ್ರೀ ಮೈಲಾರಲಿಂಗೇಶ್ವರ, ಶ್ರೀ ಮಹಾಸಿದ್ದೇಶ್ವರಿ ದೇವರುಗಳ ಕುಂಭಾಭಿಷೇಕ ನೆರವೇರಿಸಿದರು.
ಹುಬ್ಬಳ್ಳಿ, ಮೂರುಸಾವಿರ ಮಠದ ಶ್ರೀಮನ್ ಮಹಾರಾಜ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು, ಹಜರತ್ ಬೀಜಾಪುರದ ಹಾಶಿಮ್ ಪೀರ್ ದರ್ಗಾದ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ, ಕರ್ನಾಟಕ ಧರ್ಮಪ್ರಾಂತ್ಯದ ಧರ್ಮಗುರು ಡಾ.ಫಾ.ಅಲ್ಫೋನ್ಸ್ ಫರ್ನಾಂಡೀಸ್ ಯೇಸ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಸಭೆಯ ಉಪಸಭಾಪತಿಗಳಾದ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಹೊಸದುರ್ಗ ಶಾಸಕರಾದ ಬಿ.ಜಿ.ಗೋವಿಂದಪ್ಪ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ್, ರಾಣೆಬೆನ್ನೂರು ಶಾಸಕರಾದ ಪ್ರಕಾಶ್ ಕೋಳಿವಾಡ, ಹಾನಗಲ್ ಶಾಸಕರಾದ ಶ್ರೀನಿವಾಸ್ ಮಾನೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.