ಮಡಿಕೇರಿ ನ.29 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು, ಓಡಿಪಿ-ಸ್ನೇಹಾಶ್ರಯ, ಆಶೋದಯ ಸಂಸ್ಥೆ ಹಾಗೂ ವಿಹಾನ್ ಆರೈಕೆ ಮತ್ತು ಬೆಂಬಲ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಡಿ.1 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮುದಾಯ ಮುನ್ನಡೆಸಲಿ ಎಂಬ ಘೋಷವಾಕ್ಯದೊಂದಿಗೆ ‘ವಿಶ್ವ ಏಡ್ಸ್ ದಿನದ’ ಸಭಾ ಕಾರ್ಯಕ್ರಮ ನಡೆಯಲಿದೆ.
ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ನಡೆಯಲಿದೆ.
ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಸಿ.ಶ್ಯಾಮ ಪ್ರಸಾದ್ ಅವರು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಿದ್ದಾರೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ವಿಭಾಗದ ವಿಭಾಗೀಯ ಜಂಟಿ ನಿರ್ದೇಶಕರಾದ ಡಾ.ರಾಜೇಶ್ವರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಶಿವಕುಮಾರ್, ಜಿಲ್ಲಾ ಆರ್‍ಸಿಎಚ್. ಅಧಿಕಾರಿ ಡಾ.ಮಧುಸೂದನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಸಭಾಪತಿ ರವೀಂದ್ರ ರೈ, ಮಡಿಕೇರಿ ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ ಮಧುಕರ್ ಶೇಟ್ ಡಿ., ರೋಟರಿ ಸಂಸ್ಥೆಯ ಅಧ್ಯಕ್ಷರಾದ ಗೀತಾ ಗಿರೀಶ್, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎನ್.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಇತರರು ಪಾಲ್ಗೊಳ್ಳಲಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*