ಮಡಿಕೇರಿ ನ.29 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗ ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು.
ಸ್ವಾಮಿ ಅವರ ಪರವಾಗಿ ವಕೀಲ ಕೀರನ್ ನಾರಾಯಣ್ ಅವರು ನ್ಯಾಯಾಲಯದ ಮುಂದೆ ವಿಷಯ ಮಂಡಿಸಿದರು. ಕೇಂದ್ರ ಸರ್ಕಾರದ ಪ್ರತಿನಿಧಿಗಳು ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡಿದ ಕೋರ್ಟ್, ವಿಚಾರಣೆಯನ್ನು 2024 ಜ.25 ಕ್ಕೆ ಮುಂದೂಡಿತು. ಇದೇ ಸಂದರ್ಭ ಕರ್ನಾಟಕ ಸರ್ಕಾರಕ್ಕೂ ಸೂಚನೆ ನೀಡಿದ ನ್ಯಾಯಾಲಯ ಇಂದಿನಿಂದ ಮೂರು ವಾರಗಳಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ಸಲ್ಲಿಸಬೇಕು ಎಂದು ನಿರ್ದೇಶಿಸಿತು.
ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2 ಮತ್ತು 3 ಎಂದು ಉಲ್ಲೇಖಿಸಲಾಗಿದೆ.
::: ಹೋರಾಟಕ್ಕೆ ಜಯ :::
ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗ ಕೊಡವರಿಗೆ ಸಾಂವಿಧಾನಿಕ ಭದ್ರತೆಗಾಗಿ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಸಿಗಬೇಕು ಎನ್ನುವ ಕಾರಣಕ್ಕಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಶಾಂತಿಯುತ ಹೋರಾಟವನ್ನು ಮುಂದುವರೆಸಿದೆ, ಕಾನೂನು ಹೋರಾಟಕ್ಕೆ ಜಯ ಸಿಗಲಿದೆ. ಸಿಎನ್‍ಸಿ ಹೋರಾಟಕ್ಕೆ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಬೆಂಬಲವಾಗಿ ನಿಂತಿದ್ದು, ನಮ್ಮ ಬೇಡಿಕೆ ಈಡೇರುವುದು ನಿಶ್ಚಿತ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಇದೇ ಸಂದರ್ಭ ವಿಶ್ವಾಸ ವ್ಯಕ್ತಪಡಿಸಿದರು.
ವಿರಾಟ್ ಹಿಂದೂಸ್ಥಾನ್ ಸಂಘಂನ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ರಾಜ್ಯಾಧ್ಯಕ್ಷ ನಿಖುಂಜ್ ಶಾ, ಪ್ರಮುಖರಾದ ನಟರಾಜ್, ರವಿಶಂಕರ್, ಸಿಎನ್‍ಸಿಯ ಲೆಫ್ಟಿನೆಂಟ್ ಕರ್ನಲ್ ಪಾರ್ವತಿ, ಎನ್.ಶ್ರೇಯ ನಾಚಪ್ಪ, ಕಲಿಯಂಡ ಪ್ರಕಾಶ್, ಕಾಂಡೇರ ಸುರೇಶ, ಚಂಬಂಡ ಜನತ್, ಅಜ್ಜಿಕುಟ್ಟೀರ ಲೋಕೇಶ್, ಮಂದಪಂಡ ಮನೋಜ್, ಕಿರಿಯಮಾಡ ಶೆರಿನ್, ಕೃಷ್ಣಮೋಹನ್ ರೆಡ್ಡಿ ಹಾಗೂ ಮಹೇಶ್ ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*