ಮಡಿಕೇರಿ ನ.29 : ಮಡಿಕೇರಿ ನಗರಸಭೆ ಆಡಳಿತ ವೈಫಲ್ಯವನ್ನು ಎದುರಿಸುತ್ತಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ ವ್ಯವಸ್ಥೆಯನ್ನು ಸರಿ ಪಡಿಸಬೇಕೆಂದು ನಗರಸಭೆಯ ಮಾಜಿ ಉಪಾಧ್ಯಕ್ಷರಾದ ಲೀಲಾ ಶೇಷಮ್ಮ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರಸಭೆಯಲ್ಲಿ 16 ಸ್ಥಾನಗಳ ಮೂಲಕ ಬಿಜೆಪಿ ಬಹುಮತದಿಂದ ಅಧಿಕಾರ ನಡೆಸುತ್ತಿದ್ದರೂ ನಾಗರೀಕರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲವೆಂದು ಟೀಕಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಆಡಳಿತ ವ್ಯವಸ್ಥೆ ನಿಂತ ನೀರಾಗಿದೆ, ನಗರದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ರಸ್ತೆಗಳು ಹೊಂಡ, ಗುಂಡಿಗಳಾಗಿವೆ, ಅಶುಚಿತ್ವದ ವಾತಾವರಣ ಮಿತಿ ಮೀರಿದೆ. ನಗರಸಭೆಯ ಕಚೇರಿಗಳಲ್ಲಿ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಕಳೆದ ಒಂದು ವರ್ಷದಿಂದ ಸರ್ವರ್ ಸಮಸ್ಯೆ ಅತಿಯಾಗಿ ಕಾಡುತ್ತಿದ್ದರೂ ಇಲ್ಲಿಯವರೆಗೆ ಆಡಳಿತ ಮಂಡಳಿ ತಾಂತ್ರಿಕವಾಗಿ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಕಾಳಜಿಯನ್ನು ತೋರುತ್ತಿಲ್ಲ. ಸಿಬ್ಬಂದಿಗಳ ಕೊರತೆಯ ನಡುವೆ ಇರುವ ಸಿಬ್ಬಂದಿಗಳ ವಿಶ್ವಾಸವನ್ನು ಗಳಿಸುವಲ್ಲಿ ಆಡಳಿತ ನಡೆಸುತ್ತಿರುವವರು ವಿಫಲರಾಗಿದ್ದಾರೆ.
ಅಧಿಕಾರಿಗಳು ಹಾಗೂ ಸದಸ್ಯರುಗಳ ನಡುವೆ ಹೊಂದಾಣಿಕೆ ಇಲ್ಲದೆ ಇರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಆಮೆಗತಿಯಲ್ಲಿ ಸಾಗುತ್ತಿದೆ. ಅಧ್ಯಕ್ಷರು ಹಾಗೂ ಸದಸ್ಯರು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡದೆ ಸಾರ್ವಜನಿಕರ ಹಿತ ಮರೆತು ಪರಸ್ಪರ ಕಲಹದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಬೆರಳೆಣಿಕೆಯಷ್ಟು ಸದಸ್ಯರು ಮಾತ್ರ ತಮ್ಮ ವಾರ್ಡ್‍ಗಳ ಬಗ್ಗೆ ಕಾಳಜಿ ತೋರುತ್ತಿದ್ದಾರೆ. ಉಳಿದ ಬಹುತೇಕರು ಇಚ್ಛಾಶಕ್ತಿಯ ಕೊರತೆಯಿಂದ ತಾವು ಪ್ರತಿನಿಧಿಸುವ ವಾರ್ಡ್‍ಗಳ ಅಭಿವೃದ್ಧಿಯನ್ನೇ ಮರೆತು ಬಿಟ್ಟಿದ್ದಾರೆ ಎಂದು ಲೀಲಾ ಶೇಷಮ್ಮ ಆರೋಪಿಸಿದ್ದಾರೆ.
ಸರ್ಕಾರದ ಬಳಿಗೆ ನಿಯೋಗ ತೆರಳಿ ಹೆಚ್ಚಿನ ಅನುದಾನ ತರುವ ಪ್ರಯತ್ನ ಮಾಡದ ಅಧ್ಯಕ್ಷರು ಹಾಗೂ ಸದಸ್ಯರು ಸ್ವಪ್ರತಿಷ್ಠೆಗಾಗಿ ಮಡಿಕೇರಿ ಜನರ ಹಿತವನ್ನು ಬಲಿ ಕೊಡುತ್ತಿದ್ದಾರೆ. ದಸರಾ ಸಂದರ್ಭ ಮಾಡಿದ ಕಾಮಗಾರಿಗಳ ಹಣವನ್ನು ಇಲ್ಲಿಯವರೆಗೆ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿಲ್ಲವೆಂದು ಅವರು ಟೀಕಿಸಿದ್ದಾರೆ.
ಸಿಬ್ಬಂದಿಗಳ ಕೊರತೆ, ಅಭಿವೃದ್ಧಿಯಲ್ಲಿ ಹಿನ್ನಡೆ, ಅಶುಚಿತ್ವ, ಕಡತಗಳ ವಿಲೇವಾರಿಯಲ್ಲಿ ವಿಳಂಬ, ಅಧಿಕಾರಿಗಳು ಹಾಗೂ ಸದಸ್ಯರುಗಳ ನಡುವೆ ಹೊಂದಾಣಿಕೆಯ ಕೊರತೆ, ಕಚೇರಿಯಲ್ಲಿ ತಾಂತ್ರಿಕ ಅಡಚಣೆಗಳು, ಹಣವಿದ್ದರೂ ಹೊಸ ಕಾಮಗಾರಿಗಳನ್ನು ಆರಂಭಿಸದೇ ಇರುವುದು, ಅರ್ಜಿ ವಿಲೇವಾರಿಗಾಗಿ ಸಾರ್ವಜನಿಕರ ಅಲೆದಾಟ ಈ ಎಲ್ಲಾ ನ್ಯೂನತೆಗಳನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸುವ ಮೂಲಕ ಅವ್ಯವಸ್ಥೆಗಳನ್ನು ಸರಿಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಲೀಲಾ ಶೇಷಮ್ಮ ಒತ್ತಾಯಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*