ಮಡಿಕೇರಿ, ನ.29 : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್‍ಕೌಂಟರ್‍ನಲ್ಲಿ ಹುತಾತ್ಮರಾದ ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಕ್ಯಾ.ಎಂ.ವಿ.ಪ್ರಾಂಜಲ್ ಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಗೌರವ ನಮನ ಸಲ್ಲಿಸಲಾಯಿತು.
ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿ, ಎಂ.ವಿ.ಪ್ರಾಂಜಲ್ ಅವರ ದೇಶ ಸೇವೆ ಹಾಗೂ ಕರ್ತವ್ಯ ನಿಷ್ಠೆ ಕುರಿತು ಗುಣಗಾನ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಬಾಲ್ಯದಿಂದಲೂ ಅವರು ಸೈನ್ಯಕ್ಕೆ ಸೇರುವ ಕನಸು ಕಂಡಿದ್ದರು, ತಮ್ಮ ಗುರಿಗೆ ಸಮರ್ಪಿತರಾಗಿದ್ದರು. ಸ್ಕೌಟ್ ಆಗಿ, ಅವರ ಬದ್ಧತೆ ಅಚಲವಾಗಿತ್ತು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಹೆಮ್ಮೆಪಡುತ್ತಿದ್ದರು ಎಂದರು.
ಪ್ರಾಂಜಲ್ ನಿಜವಾಗಿಯೂ ಅಸಾಧಾರಣ ಮತ್ತು ಅವರ ನಿಧನವು ಅಪಾರ ನಷ್ಟವಾಗಿದೆ, ಡಿಪಿಎಸ್ ಎಂಆರ್‍ಪಿಎಲ್‍ನಿಂದ ಭಾರತೀಯ ಸೇನೆಯ ಶ್ರೇಣಿಗೆ ಪ್ರಾಂಜಲ್ ಅವರ ಪ್ರಯಾಣವು ಅಚಲವಾದ ಸಮರ್ಪಣೆಯಿಂದ ಗುರುತಿಸಲ್ಪಟ್ಟಿದೆ ಎಂದರು.
ವೀರ ಮರಣ ಅಪ್ಪಿದ ಪ್ರಾಂಜಿಲ್ ಅವರಿಗೆ ಈ ನಮನ ಕಾರ್ಯಕ್ರಮ ಏಕಕಾಲದಲ್ಲಿ ರಾಜ್ಯ ಎಲ್ಲಾ ಜಿಲ್ಲೆಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುತ್ತಿದೆ. ಸ್ಕೌಟ್ಸ್, ಗೈಡ್ಸ್ ವತಿಯಿಂದ ಮನೆ ಮನೆಗಳಲ್ಲಿ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ಬೇಬಿ ಮ್ಯಾಥ್ಯೂ ತಿಳಿಸಿದರು.
ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡುವ ಎನ್ನುವ ಮಾತಿನಿಂದ ಶಾಲಾ ದಿನಗಳಲ್ಲೇ ಸೇನೆ ಸೇರುವ ಬಗ್ಗೆ ಮಾತನಾಡುತ್ತಿದ್ದ ಕ್ಯಾಪ್ಟನ್ ಪ್ರಾಂಜಲ್ ನಂತರ ಅದನ್ನು ಸಾಧಿಸಿ ತೋರಿಸಿ ಹುತಾತ್ಮರಾದರು ಎಂದರು.
ಈ ಸಂದರ್ಭದಲ್ಲಿ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ, ಖಜಾಂಚಿ ಪುಷ್ಪವೇಣಿ, ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಗೈಡ್ಸ್ ಸಂಸ್ಥೆಯ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸಹ ಕಾರ್ಯದರ್ಶಿ ಕುಟ್ಟಪ್ಪ, ಸಂಸ್ಥೆಯ ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಧನಂಜಯ, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಗೈಡ್ ಕ್ಯಾಪ್ಟನ್ ಗಾಯನ, ಇನ್ನಿತರ ಪದಾಧಿಕಾರಿಗಳು ಇದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*