ಕುಶಾಲನಗರ ನ.29 : ಜಮ್ಮು ಮತ್ತು ರಜೌರಿಯಲ್ಲಿ ಉಗ್ರರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದ ಕ್ಯಾ. ಪ್ರಾಂಜಲ್ ಅವರಿಗೆ ಕುಶಾಲನಗರದ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ, ಸ್ಕೌಟ್ಸ್ ನ ಶಾಲೆಯ ಘಟಕ ಹಾಗೂ ಶಾಲೆಯ ಎನ್.ಎಸ್.ಎಸ್.ಘಟಕದ ವತಿಯಿಂದ
ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಎಂ.ವಿ.ಪ್ರಾಂಜಲ್ ಗೆ ನಮನ ಸಲ್ಲಿಸಲಾಯಿತು.
ಸಂಸ್ಥೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಎಸ್ಡಿಎಂಸಿ ಅಧ್ಯಕ್ಷ ಎ.ಎಂ.ಜವರಯ್ಯ, ಗೈಡ್ಸ್ ಸಂಸ್ಥೆಯ ಕ್ಯಾಪ್ಟನ್ ಸಿ.ಎಂ.ಸುಲೋಚನ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ಸಲ್ಲಿಸಲಾಯಿತು.
ಹುತಾತ್ಮ ಯೋಧ ಎಂ.ವಿ.ಪ್ರಾಂಜಲ್ ಅವರ ಕರ್ತವ್ಯ ನಿಷ್ಠೆ, ದೇಶ ಪ್ರೇಮ ಹಾಗೂ ತ್ಯಾಗ ಬಲಿದಾನದ ಕುರಿತು ಮಾತನಾಡಿದ ಗೈಡ್ಸ್ ಸಂಸ್ಥೆಯ ಸಹಾಯಕ ಕಮೀಷನರ್ ಸಿ.ಎಂ.ಸುಲೋಚನ ಮಾತನಾಡಿ, ಈ ನುಡಿ ನಮನ ಕಾರ್ಯಕ್ರಮದಿಂದ ಮಕ್ಕಳಲ್ಲಿ ದೇಶಪ್ರೇಮ ಬೆಳೆಸಲು ಸಾಧ್ಯವಾಗುತ್ತದೆ ಎಂದರು.
ನಿವೃತ್ತ ಮುಖ್ಯೋಪಾಧ್ಯಾಯ ಎಂ.ಎಚ್.ನಜೀರ್ ಅಹ್ಮದ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪ್ರಾಮಾಣಿಕತೆ ಬೆಳೆಸಿಕೊಂಡು ದೇಶದ ಸಮಗ್ರತೆಗೆ ಪಣ ತೊಡಬೇಕು ಎಂದರು.
ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ದೇಶದ ರಕ್ಷಣಾ ಕಾರ್ಯದಲ್ಲಿ ತೊಡಗಿರುವವರನ್ನು ಗೌರವಿಸಬೇಕು ಎಂದರು.
ಎಸ್ಡಿಎಂಸಿ ಅಧ್ಯಕ್ಷ ಎ.ಎಂ.ಜವರಯ್ಯ, ಸದಸ್ಯ ಕೆ.ಎಸ್.ರಾಜಾಚಾರಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ,ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ ಇದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*