ಕುಶಾಲನಗರ ನ.30 : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ: 50 ರ ಮಹೋತ್ಸವದ ಸಂದರ್ಭದಲ್ಲಿ ಶಾಲೆಯ ಕನ್ನಡ ಭಾಷಾ ಸಂಘ, ಎನ್.ಎಸ್.ಎಸ್.ಘಟಕ ಹಾಗೂ ವಿದ್ಯಾರ್ಥಿ ಸಂಘದ ವತಿಯಿಂದ ಭಕ್ತ ಕನಕದಾಸರ ಜಯಂತಿ ಆಚರಿಸಲಾಯಿತು.
ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಕನಕದಾಸರ ಜೀವನ ಚರಿತ್ರೆ ಹಾಗೂ ಬದುಕು ಕುರಿತು ಮಾಹಿತಿ ನೀಡಿದ ಶಾಲೆಯ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ, ದಾಸರಲ್ಲಿಯೇ ಕನಕದಾಸರು ಅತ್ಯಂತ ಶ್ರೇಷ್ಠರು. ಉಳಿದ ಸಮುದಾಯಕ್ಕೆ ಮಾರ್ಗದರ್ಶಕರಾಗಿದ್ದರು. ವಿದ್ಯಾರ್ಥಿಗಳು ಅವರ ತತ್ತ್ವಾದರ್ಶ ಅಳವಡಿಸಿಕೊಳ್ಳಬೇಕು ಎಂದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್ ಮಾತನಾಡಿ, ಕನಕ ದಾಸರು ಸಾಮಾಜಿಕ ಸಮಾನತೆ ಮತ್ತು ಧಾರ್ಮಿಕ ಸಹಿಷ್ಣುತೆಯನ್ನು ಉತ್ತೇಜಿಸುವಲ್ಲಿ ಪ್ರವರ್ತಕರಾಗಿದ್ದರು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸಂತರ ಜೀವನ ಆದರ್ಶ ಹಾಗೂ ತತ್ವಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು.
ಶಿಕ್ಷಕಿಯರಾದ ಬಿ.ಎನ್.ಸುಜಾತ, ಅನ್ಸಿಲಾ ರೇಖಾ, ಶಾಲಾ ನಾಯಕಿ ಐಶ್ವರ್ಯ, ಉಪ ನಾಯಕ ಕೆ.ಎಂ.ಗೌತಮ್, ಶಾಲಾ ಶಿಕ್ಷಕರು ಇದ್ದರು. ವಿದ್ಯಾರ್ಥಿ ಕೆ.ಎಂ.ಮದನ್ ಕಾರ್ಯಕ್ರಮ ನಿರ್ವಹಿಸಿದರು. ಕನಕದಾಸರ ಕುರಿತು ಭಾಷಣ ಮಾಡಿದ ವಿದ್ಯಾರ್ಥಿಗಳು ಕನಕದಾಸರ ಕೀರ್ತನೆಗಳನ್ನು ಹಾಡಿದರು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.








