ಬೆಂಗಳೂರು ಡಿ.1 : ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿ ಹನುಮಂತಯ್ಯನವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.
ಕೆಂಗಲ್ ಹನುಮಂತಯ್ಯ ಅವರ ಕುಟುಂಬಸ್ಥರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಹಾಗೂ ನಸೀರ್ ಅಹ್ಮದ್ ಮತ್ತಿತರ ಗಣ್ಯರು ಹಾಜರಿದ್ದರು.