ವಿರಾಜಪೇಟೆ ಡಿ.1 : ವಿರಾಜಪೇಟೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
1 ರಿಂದ 4ನೇ ತರಗತಿ ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಲಿಶ್ಮಿತಾ ಪ್ರಥಮ, 5 ರಿಂದ 7ನೇ ತರಗತಿ ವಿಭಾಗದಲ್ಲಿ ಪಾವನಿ ಲಘು ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಲ್ಲಿದ್ದಾರೆ.









