Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ತಿತಿಮತಿಯಲ್ಲಿ ಗಮನ ಸೆಳೆದ ‘ಗಿರಿಜನ ಉತ್ಸವ’ : ಆದಿವಾಸಿ ಜನರ ಕುಂದುಕೊರತೆ ಆಲಿಸುವಲ್ಲಿ ಶೀಘ್ರ ಸಭೆ ಆಯೋಜನೆ : ಶಾಸಕ ಎ.ಎಸ್.ಪೊನ್ನಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ತಿತಿಮತಿಯಲ್ಲಿ ಗಮನ ಸೆಳೆದ ‘ಗಿರಿಜನ ಉತ್ಸವ’ : ಆದಿವಾಸಿ ಜನರ ಕುಂದುಕೊರತೆ ಆಲಿಸುವಲ್ಲಿ ಶೀಘ್ರ ಸಭೆ ಆಯೋಜನೆ : ಶಾಸಕ ಎ.ಎಸ್.ಪೊನ್ನಣ್ಣ

ಡಿಸೆಂಬರ್ 1, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.1 : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆದಿವಾಸಿ ಜನರ ಸಂಖ್ಯೆ ಹೆಚ್ಚಿದ್ದು, ಆದಿವಾಸಿ ಜನರ ಕುಂದುಕೊರತೆ ಪರಿಹರಿಸುವ ನಿಟ್ಟಿನಲ್ಲಿ ಸದ್ಯದಲ್ಲೇ ಸಭೆ ಆಹ್ವಾನಿಸಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಗ್ರ ಗಿರಿಜನ ಯೋಜನಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದ ಸಭಾಂಗಣದಲ್ಲಿ ನಡೆದ ‘ಗಿರಿಜನ ಉತ್ಸವ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಇನ್ನೂ ಸಾಕಷ್ಟು ಕುಟುಂಬಗಳಿಗೆ ಅರಣ್ಯ ಹಕ್ಕು ಪತ್ರ ಹಾಗೂ ಸಮುದಾಯ ಹಕ್ಕುಪತ್ರ ಸಹ ದೊರೆಯಬೇಕಿದೆ. ಆ ನಿಟ್ಟಿನಲ್ಲಿ ಹಲವು ಸಮಸ್ಯೆಗಳನ್ನು ಚರ್ಚಿಸಿ ಇತ್ಯರ್ಥಪಡಿಸಲು ಸಭೆ ಆಹ್ವಾನಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು.
ಈಗಾಗಲೇ ಗಿರಿಜನರ ಕುಂದುಕೊರತೆ ಆಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಆ ನಿಟ್ಟಿನಲ್ಲಿ ಸ್ಥಳೀಯವಾಗಿ ಸಹ ಹಲವು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಭೆ ಆಯೋಜಿಸಲಾಗುವುದು ಎಂದು ಶಾಸಕರು ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಪ್ರತಿಯೊಂದು ಇಲಾಖೆಯಲ್ಲಿಯೂ ಸಹ ಇಂತಿಷ್ಟು ಹಣವನ್ನು ಮೀಸಲಿಟ್ಟು ಹಲವು ಉಪಯುಕ್ತ ಕಾರ್ಯಕ್ರಮಗಳಿಗೆ ಅನುದಾನ ಬಳಸಲು ಕಾಯ್ದೆಯನ್ನೇ ಜಾರಿಗೊಳಿಸಿದರು ಎಂದು ಶಾಸಕರು ಇದೇ ಸಂದರ್ಭದಲ್ಲಿ ವಿವರಿಸಿದರು.
ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಿದೆ. ಹಾಗೆಯೇ ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ಪ್ರಮುಖ ಕಾರ್ಯಕ್ರಮಗಳಾಗಿವೆ ಎಂದರು.
‘ಅನಾದಿಕಾಲದಿಂದಲೂ ಶೋಷಣೆ ಅನುಭವಿಸಿಕೊಂಡು ಬಂದಿರುವ ಜನರು ಜಾಗೃತರಾಗಬೇಕು. ಸರ್ಕಾರದ ಸೌಲಭ್ಯಗಳು ಹಂಚಿಕೆಯಾಗಬೇಕು. ಸಂಪತ್ತು ಬಂಡವಾಳ ಶಾಹಿಗಳ ಕೈಯಲ್ಲಿದ್ದು, ಅದು ಎಲ್ಲಾ ಜನರಿಗೂ ತಲುಪಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಪ್ರತಿಪಾದಿಸಿದರು.’
ಕೊಡಗು ಜಿಲ್ಲೆಯಲ್ಲಿ ಯರವ, ಕುಡಿಯ, ಜೇನುಕುರುಬ, ಬೆಟ್ಟಕುರುಬ, ಕಾಡುಕುರುಬ ಸೋಲಿಗ ಹೀಗೆ ಹಲವು ಆದಿವಾಸಿ ಕುಟುಂಬಗಳು ಇದ್ದು, ತಮ್ಮದೇ ಆದ ಸಂಸ್ಕೃತಿಯನ್ನು ಹೊಂದಿದ್ದಾರೆ. ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ‘ಗಿರಿಜನ ಉತ್ಸವ’ ಉತ್ತಮ ವೇದಿಕೆಯಾಗಿದೆ ಎಂದರು.
ಜಿ.ಪಂ.ಮಾಜಿ ಸದಸ್ಯರಾದ ಪಂಕಜ ಅವರು ಮಾತನಾಡಿ ಸರ್ಕಾರ ಆದಿವಾಸಿ ಜನರ ಶ್ರೇಯೋಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪೌಷ್ಟಿಕ ಆಹಾರ ವಿತರಣೆ, ವಿದ್ಯಾರ್ಥಿ ನಿಲಯ ಸೌಲಭ್ಯ, ಆಶ್ರಮ ಶಾಲೆಗಳು, ಹೀಗೆ ಹಲವು ಯೋಜನೆಗಳಿದ್ದು, ಅವುಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದರು.
ಸಮಗ್ರ ಗಿರಿಜನ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಜಿಲ್ಲೆಯಲ್ಲಿ ಸುಮಾರು 250 ಹಾಡಿಗಳು, 161 ಹಾಡಿಗಳಲ್ಲಿ ಶೇ.75 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಜಿಲ್ಲೆಯಲ್ಲಿ 21 ಸಾವಿರ ಯರವ, 12 ಸಾವಿರ ಜೇನುಕುರುಬ ಸೇರಿದಂತೆ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ವಾಸ ಮಾಡುತ್ತಿದ್ದಾರೆ. ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆದಿವಾಸಿ ಜನರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದರು. ಜಿಲ್ಲೆಯ 11 ಆಶ್ರಮ ಶಾಲೆಗಳಲ್ಲಿ ಗಿರಿಜನ ಸಮುದಾಯದ ಮಕ್ಕಳು ವಿದ್ಯಾರ್ಜನೆ ಮಾಡುತ್ತಿದ್ದಾರೆ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್  ಮಾತನಾಡಿ, ಸ್ಥಳೀಯ ಕಲೆ, ಸಂಸ್ಕೃತಿಯನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸುವಂತಾಗಬೇಕು ಮತ್ತು ಪ್ರೋತ್ಸಾಹಿಸುವಲ್ಲಿ ಸರ್ಕಾರ ಹಲವು ಕಾರ್ಯಕ್ರಮ ಆಯೋಜಿಸಿದೆ. ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಸೌಕರ್ಯಗಳಿದ್ದು, ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮಾತನಾಡಿ ನಾಡಿನ ಸ್ಥಳೀಯ ಕಲೆ, ಸಂಸ್ಕೃತಿಗೆ ಪ್ರೋತ್ಸಾಹಿಸುವಲ್ಲಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಜನಪರ ಉತ್ಸವ ಹಾಗೂ ಗಿರಿಜನ ಉತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಎಲ್ಲಾ ಸ್ಥಳೀಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವಲ್ಲಿ ಪ್ರಾಯೋಜನೆ ಕಾರ್ಯಕ್ರಮ ನೀಡುವ ಮೂಲಕ ಕಲೆ, ಸಂಸ್ಕೃತಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದರು.
ಗ್ರಾ.ಪಂ.ಅಧ್ಯಕ್ಷರಾದ ಪಿ.ಎಸ್.ಪೊನ್ನು, ತಹಶೀಲ್ದಾರರಾದ ಪ್ರಶಾಂತ್, ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್, ಬಿ.ಆರ್‍ಸಿ ವನಜಾಕ್ಷಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗುರುಶ್ರೀ, ಲ್ಯಾಂಪ್ ಸೊಸೈಟಿ ಅಧ್ಯಕ್ಷರಾದ ಮಣಿ, ತಿತಿಮತಿ ಮರೂರು ಗಿರಿಜನ ಆಶ್ರಮ ಶಾಲೆಯ ಮುಖ್ಯ ಶಿಕ್ಷಕರಾದ ಸಿದ್ದಲಿಂಗ ಶೆಟ್ಟಿ, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಪಾರ್ವತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಪ್ರೋಜ್, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಮಂಗಳ, ಜಾನ್, ಇತರರು ಇದ್ದರು. ಸಂಪಾಜೆ ಶಾಲೆಯ ಶಿಕ್ಷಕರಾದ ಎಚ್.ಜಿ.ಕುಮಾರ ನಿರೂಪಿಸಿದರು, ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು, ಮಣಜೂರು ಮಂಜುನಾಥ್ ವಂದಿಸಿದರು.
ಜನಮನ ರಂಜಿಸಿದ ಗಿರಿಜನ ಉತ್ಸವ: ತಿತಿಮತಿಯಲ್ಲಿ ನಡೆದ ಗಿರಿಜನ ಉತ್ಸವವು ಜನಾಕರ್ಷಣೆಗೊಳಿಸಿತು. ಜೆ.ಪಿ.ರಮೇಶ್ ಅವರ ಗಿರಿಜನ ಆದಿವಾಸಿ ಹಾಡು ಎಲ್ಲರನ್ನು ರಂಗೇರಿಸಿತು. ಚೊಟ್ಟೆಪಾರೆ ಹಾಡಿಯ ಜೆ.ಕೆ.ರಾಮು ಮತ್ತು ತಂಡದವರು ಜೇನುಕುರುಬ ನೃತ್ಯ ಕಲಾ ಪ್ರದರ್ಶನ ಮಾಡಿ ಗಮನ ಸೆಳೆದರು.
ನಂಗ ಇರುದು ಹುಲ್ಲು ಮನೆ… ಹಿಂದೆ ಇದ್ದದ್ದು ಕಟ್ಟೆ ಬುಡಲಿನಲ್ಲಿ… ಈಗಲೂ ಇರುವುದು ಹುಲ್ಲು ಮನೆ…ಅಜ್ಜ ಅಜ್ಜಿ ಇದ್ದದ್ದು ಕಟ್ಟೆಬುಡಲೆ (ನಮಗೆ ಈಗಲೂ ಇರುವುದು ಹುಲ್ಲು ಮನೆ, ಹಿಂದೆ ಇದ್ದಿದ್ದು ಬಿದಿರು ಮನೆ, ಈಗಲೂ ಇರುವುದು ಹುಲ್ಲು ಮನೆ, ತಾತಂದಿರೂ ಇದ್ದಿದ್ದೂ ಸಹ ಹುಲ್ಲು ಮನೆ) ಜೇನು ಕುರುಬ ಭಾಷೆಯಲ್ಲಿ ಹಾಡು ಹಾಡಿ ನೃತ್ಯ ಪ್ರದರ್ಶನ ಮಾಡಿದ್ದು, ಎಲ್ಲರನ್ನು ಮುದಗೊಳಿಸಿತು.
ನಾಲಡಿ ಗ್ರಾಮದ ಬೋಜಕ್ಕಿ ಮತ್ತು ತಂಡದವರು ಕುಡಿಯರ ದುಡಿ ನೃತ್ಯ ಪ್ರದರ್ಶನ ಮಾಡಿದರು. ತೋರ ಗ್ರಾಮದ ಕುಡಿಯರ ಗೋಪಮ್ಮ ಮತ್ತು ತಂಡದವರು ಉರುಟ್ಟಿಕೋಟ್ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.
ಕುಡಿಯರ ಶಾರದ ಮತ್ತು ತಂಡದವರು ನೃತ್ಯ ಪ್ರದರ್ಶನದ ಜೊತೆ ಹಾಡು ಹಾಡಿ ಮನ ಸೆಳೆದರು. ನಾಣಚ್ಚಿ ಕುಮಾರ ತಂಡದವರು ಜೇನುಕುರುಬ ನೃತ್ಯ ಪ್ರದರ್ಶನ ಮಾಡಿದರು. ವಿವಿಧ ಆದಿವಾಸಿ ತಂಡಗಳು ಕಲಾಪ್ರದರ್ಶನ ಮಾಡಿ ರಂಜಿಸಿದರು.
ಕುಶಾಲನಗರದ ರಾಜು ಮತ್ತು ತಂಡದವರು ಸರ್ಕಾರದ ನೂತನ ಕಾರ್ಯಕ್ರಮಗಳಾದ ಗ್ಯಾರಂಟಿ ಯೋಜನೆಗಳ ಬಗ್ಗೆ ಹಾಡು ಹಾಡಿದರು.
ಜೇನುಕುರುಬ ಕಲಾವಿದ ಜೆ.ಬಿ.ರಮೇಶ್ ಮಾತನಾಡಿ ಜೇನುಕುರುಬ ಸಂಸ್ಕೃತಿ ಮತ್ತು ಪದ್ಧತಿ, ಗೆಡ್ಡೆಗೆಣಸು ತಿಂದು ಬದುಕುತ್ತಿದ್ದು, ದೇವರ ಆರಾಧನೆ ಕುರಿತು ಹಾಡುವುದು, ಮರದ ಬುಡದಲ್ಲಿ ಕಲ್ಲು ಪೂಜಿಸುವುದು, ಹೀಗೆ ಹಲವು ಪದ್ಧತಿಯ ಬಗ್ಗೆ ಹಾಡು ಹಾಗೂ ಕಲಾ ಪ್ರದರ್ಶನ ಮೂಲಕ ಬೆಳಕು ಚೆಲ್ಲಲಾಗುತ್ತಿದೆ ಎಂದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.