Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಚ್‍ಐವಿ/ಏಡ್ಸ್ ಬಗ್ಗೆ ಜಾಗೃತಿ ಅಗತ್ಯ : ಅನಿತಾ ಪೂವಯ್ಯ ಸಲಹೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಚ್‍ಐವಿ/ಏಡ್ಸ್ ಬಗ್ಗೆ ಜಾಗೃತಿ ಅಗತ್ಯ : ಅನಿತಾ ಪೂವಯ್ಯ ಸಲಹೆ

ಡಿಸೆಂಬರ್ 1, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.1 : ಪ್ರತಿಯೊಬ್ಬ ನಾಗರಿಕರಿಗೂ ಎಚ್‍ಐವಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ನಗರಸಭೆ ಅಧ್ಯಕ್ಷ ಎನ್.ಪಿ.ಅನಿತಾ  ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು, ಓಡಿಪಿ-ಸ್ನೇಹಾಶ್ರಯ, ಆಶೋದಯ ಸಂಸ್ಥೆ ಹಾಗೂ ವಿಹಾನ್ ಆರೈಕೆ ಮತ್ತು ಬೆಂಬಲ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮುದಾಯ ಮುನ್ನಡೆಸಲಿ ಎಂಬ ಘೋಷವಾಕ್ಯದೊಂದಿಗೆ ನಡೆದ ‘ವಿಶ್ವ ಏಡ್ಸ್ ದಿನದ’ ಸಭಾ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದರು.

ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುವಂತಹ ವೈರಾಣು ಎಂದರೆ ಅದು ಎಚ್‍ಐವಿ ಸೋಂಕು ಆಗಿದೆ. ಸೊಂಕನ್ನು ತಡೆಗಟ್ಟಲು ಸರ್ಕಾರ ಹಲವು ಯೋಜನೆ ಹಮ್ಮಿಕೊಂಡಿದ್ದು, ಅದರಲ್ಲಿ ಎಚ್‍ಐವಿ ಸೋಂಕಿನ ಜಾಗೃತಿ ಕಾರ್ಯಕ್ರಮವು ಒಂದಾಗಿದೆ ಎಂದು ತಿಳಿಸಿದರು.
ಹಚ್ಚೆ ಹಾಕಿಸುವುದು, ರಕ್ತವನ್ನು ಪರೀಕ್ಷಿಸದೆ ಸ್ವೀಕಾರ ಮಾಡುವುದು, ಗರ್ಭಿಣಿಯರು ಎಚ್‍ಐವಿ ಪರೀಕ್ಷೆ ಮಾಡಿಸದೆ ಇರುವುದು, ಅಸುರಕ್ಷಿತ ಲೈಂಗಿಕ ಕ್ರಿಯೆಗೆ ಒಳಗಾಗುವುದು ಇವುಗಳಿಂದ ಎಚ್‍ಐವಿ ಸೋಂಕು ಹರಡುತ್ತದೆ ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿಗಳಾದ ಡಾ.ಎನ್.ಆನಂದ್ ಮಾತನಾಡಿ ವಿಶ್ವ ಏಡ್ಸ್ ದಿನವು ಸಮುದಾಯಗಳ ಸಾಧನೆಗಳ ಆಚರಣೆಗಿಂತ ಹೆಚ್ಚಾಗಿ ತಮ್ಮ ನಾಯಕತ್ವವನ್ನು ಸಕ್ರಿಯಗೊಳಿಸುವ ಬೆಂಬಲಿಸುವ ಕ್ರಿಯೆಯಾಗಿದೆ. ಎಚ್‍ಐವಿಯನ್ನು ಅಂತ್ಯಗೊಳಿಸುವಲ್ಲಿ ಸಮುದಾಯಗಳು ನಾಯಕತ್ವದ ಪಾತ್ರವನ್ನು ಹೆಚ್ಚಾಗಿ ಮಾಡಬೇಕಾಗಿದೆ ಎಂದು ತಿಳಿಸಿದರು.
ವಿಶ್ವ ಏಡ್ಸ್ ದಿನವೂ ಇಲ್ಲಿಯವರೆಗಿನ ಪ್ರಗತಿಯನ್ನು ಪ್ರತಿಬಿಂಬಿಸಲು 2030 ರ ವೇಳೆಗೆ ಏಡ್ಸ್ ಅನ್ನು ಕೊನೆಗೊಳಿಸುವ ಗುರಿಗಳನ್ನು ಸಾಧಿಸಲು ಕಾರ್ಯಕ್ರಮದ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಎಚ್‍ಐವಿ ಪ್ರತಿಕ್ರಿಯೆಯ ಯಶಸ್ಸನ್ನು ಖಚಿತಪಡಿಸಿಕೊಳ್ಳಲು ಒಂದು ಅವಕಾಶವಾಗಿದೆ ಎಂದು ತಿಳಿಸಿದರು.
ಪ್ರತಿ ವರ್ಷ ಈ ದಿನವನ್ನು ಒಂದೊಂದು ಘೋಷವಾಕ್ಯದೊಂದಿಗೆ ಪ್ರಾರಂಭಿಸಲಾಗುತ್ತದೆ ಈ ವರ್ಷದ ಘೋಷ ವಾಕ್ಯವು “ಸಮುದಾಯಗಳು ಮುನ್ನಡೆಸಲಿ” (ಸಮುದಾಯಗಳು ಮುನ್ನಡೆಸುವ ಮೂಲಕ ಜಗತ್ತಿನಲ್ಲಿ ಏಡ್ಸ್ ಅನ್ನು ಕೊನೆಗಾಣಿಸಬಹುದು) ಎಂದಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಮಾತನಾಡಿ ಕ್ರಮಬದ್ಧವಾದ ಜೀವನಶೈಲಿ ಇದ್ದರೆ ಎಚ್‍ಐವಿ ಸೋಂಕಿಗೆ ಒಳಗಾಗುವುದಿಲ್ಲ. ಆದ್ದರಿಂದ ಆರೋಗ್ಯಯುತವಾಗಿ ಸಮಾಜದಲ್ಲಿ ಬದುಕಲು ಸಂವಿಧಾನದಲ್ಲಿ ಹಕ್ಕಿದೆ. ಅದನ್ನು ಗಮನದಲ್ಲಿಟ್ಟುಕೊಂಡು ರಕ್ತಪರೀಕ್ಷೆ ಮಾಡಿಸಿಕೊಂಡು ಉತ್ತಮ ಆರೋಗ್ಯ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಸಮುದಾಯದಲ್ಲಿ ಬದುಕುವ ಹಕ್ಕು ಪ್ರತಿಯೊಬ್ಬರಿಗೆ ಕಾನೂನು ನೀಡಿದೆ. ಹಾಗೆಯೇ ರೋಗಲಕ್ಷಣ ಕಂಡು ಬಂದಲ್ಲಿ ಇನ್ನೊಬ್ಬರಿಗೆ ಹರಡಿಸುವುದು ಕಾನೂನಿನ ಅಡಿಯಲ್ಲಿ ಅಪರಾಧ. ಅದನ್ನು ಪರಿಗಣನೆಗೆ ತೆಗೆದುಕೊಂಡು ಎಚ್‍ಐವಿ ಸೋಂಕು ಇದ್ದಲ್ಲಿ ರಕ್ತಪರೀಕ್ಷೆ ಮಾಡಿಸಿ ಚಿಕಿತ್ಸೆಗೆ ಒಳಗಾಗುವ ಅಗತ್ಯ ಇದೆ ಎಂದರು.
ರೋಟರಿ ಸಂಸ್ಥೆಯ ಅಧ್ಯಕ್ಷರಾದ ಗೀತಾಗಿರೀಶ್ ಮಾತನಾಡಿ ಎಚ್‍ಐವಿ ಸೋಂಕನ್ನು ತಡೆಗಟ್ಟಲು ಸಮುದಾಯದಿಂದಲೇ ಸಾಧ್ಯ ಎಂದರು.
ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ರವೀಂದ್ರ ರೈ ಮಾತನಾಡಿ ರೋಗವನ್ನು ಮರೆಯಬೇಕೆ ಹೊರತು ರೋಗಿಯನ್ನಲ್ಲ. ಸಮಾಜದಲ್ಲಿ ಇತರರಂತೆಯೇ ಎಚ್‍ಐವಿ ಸೋಂಕಿತರನ್ನು ಕಾಣಬೇಕು. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಎಚ್‍ಐವಿ ಸೋಂಕು ನಿರ್ಮೂಲನೆ ಮಾಡುವಲ್ಲಿ ಯಶಸ್ವಿ ಯಾಗೋಣ ಎಂದು ಕರೆ ನೀಡಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಚೇತನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪಾಲಕ್ಷ ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.