ಮಡಿಕೇರಿ ಡಿ.1 : ಪಾಠ-ಪ್ರವಚನಗಳೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರಮುಖರು ಕರೆ ನೀಡಿದರು.
ಶ್ರೀ ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಮದೆನಾಡಿನ ಬಿಜಿಎಸ್ ಪಬ್ಲಿಕ್ ಸ್ಕೂಲ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಪುಟಾಣಿ ಮಕ್ಕಳೊಂದಿಗೆ ಉದ್ಘಾಟಿಸಿ ಮಾಡಿದ ಶಕ್ತಿ ದಿನಪತ್ರಿಕೆ ಹಿರಿಯ ಉಪ ಸಂಪಾದಕ ಕುಡೆಕಲ್ ಸಂತೋಷ್, ಮಕ್ಕಳಲ್ಲಿ ಸಾಧಿಸುವ ಛಲ ಇರಬೇಕು, ಜೀವನದಲ್ಲಿ ಮುಂದೆ ಬರಬೇಕಾದರೆ ವಿದ್ಯೆಯೊಂದಿಗೆ ಇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಪ್ರತಿಯೋರ್ವರಲ್ಲೂ ಪ್ರತಿಭೆ ಇರುತ್ತದೆ, ಅದನ್ನು ಹೊರ ಹಾಕುವದರ ಮೂಲಕ ಸಾಧನೆ ಮಾಡಬೇಕು. ಮಕ್ಕಳೆಂದ ಮೇಲೆ ತುಂಟಾಟ ಇದ್ದೇ ಇರುತ್ತದೆ, ಅದನ್ನೆಲ್ಲ ಮೆಟ್ಟಿ ನಿಂತು ಮುಂದೆ ಬರಬೇಕು ಎಂದು ಹೇಳಿದರು.
ಗುರಿಯ ಹಿಂದೆ ಗುರುಗಳಿದ್ದಾರೆ ಎಂಬ ಮಾತಿನಂತೆ ಶಿಕ್ಷಣ ನೀಡಿದ ಗುರುಗಳನ್ನು ಗೌರವಿಸಬೇಕು, ಪ್ರಸ್ತುತ ಮೊಬೈಲ್ ಅನಿವಾರ್ಯವಾಗಿದ್ದು, ಅದರಲ್ಲಿನ ಉತ್ತಮ ಮಾಹಿತಿಗಳನ್ನು ಪಡೆದುಕೊಂಡು ಕ್ರಿಯಾತ್ಮಕ ಚಟುವಟಿಕೆಗಳತ್ತ ಆಸಕ್ತಿ ತೋರುವದರೊಂದಿಗೆ ವಿದ್ಯೆ ನೀಡಿದ ಶಾಲೆಗೆ, ಹುಟ್ಟು ನೀಡಿದ ನಾಡಿಗೆ ಕೀರ್ತಿ ತರಬೇಕು, ಸಾಧ್ಯವಾದಷ್ಟು ಪತ್ರಿಕೆ ಹಾಗೂ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಲ್ಲಿ ಜ್ಞಾನ ಸಂಪಾದನೆಯಾಗಲಿದೆ ಎಂದು ಹೇಳಿದರು.
ತಾಯಿ-ಮಕ್ಕಳ ಹಬ್ಬ :: ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಮಡಿಕೇರಿ ಕ್ಲಸ್ಟರ್‍ನ ಸಿಆರ್‍ಪಿ ಶ್ರುತಿಶ್ರೀ ಮಾತನಾಡಿ, ನವೆಂಬರ್ ತಿಂಗಳಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ನೆಹರು ಜನ್ಮ ದಿನಾಚರಣೆ ಇದ್ದು, ಒಂದು ರೀತಿಯಲ್ಲಿ ತಾಯಿ ಹಾಗೂ ಮಕ್ಕಳ ದಿನಾಚರಣೆಯನ್ನು ಒಂದೇ ತಿಂಗಳಲ್ಲಿ ಆಚರಣೆ ಮಾಡುವ ಸೌಭಾಗ್ಯ ದೊರೆತ್ತಿದೆ. ಮಕ್ಕಳು ಭವ್ಯ ಭಾರತದ ಪ್ರಜೆಗಳು, ಚೆನ್ನಾಗಿ ಓದಿ ಉತ್ತಮ ನಾಗರಿಕರಾಗಿ ದೇಶದ ಉಜ್ವಲ ಭವಿಷ್ಯ ರೂಪಿಸುವವರಾಗಬೇಕು ಎಂದು ಕರೆ ನೀಡಿದರು.
ವಿದ್ಯಾಭ್ಯಾಸ ಹಂತದಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ. ಸೋಲೇ ಗೆಲುವಿನ ಮೊದಲ ಮೆಟ್ಟಿಲು. ಉತ್ತಮ ಮಾರ್ಗವನ್ನು ಆಯ್ಕೆ ಮಾಡಿಕೊಂಡು ಗುರಿ ಮುಟ್ಟುವ ಛಲ ಇರಬೇಕೆಂದು ಹೇಳಿದರು.
ಮೊಬೈಲ್ ಗೀಳನ್ನು ಬಿಟ್ಟು ಒಳ್ಳೆಯ ಜೀವನದೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ, ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅಡೆ ತಡೆಗಳನ್ನು ಬದಿಗಿರಿಸಿ ನೇರವಾಗಿ ನಡೆಯಬೇಕೆಂದು ಕಿವಿ ಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜಿಎಸ್ ಸ್ಕೂಲ್ ಆಡಳಿತಾಧಿಕಾರಿ ಸುಧಾಕರ್, ಕರ್ನಾಟಕದಲ್ಲಿ ಕನ್ನಡವನ್ನು ಬಳಸಿ, ಬೆಳೆಸಿ ಗೌರವಿಸುವದು ಕನ್ನಡಿಗರಾದ ನಮ್ಮೆಲ್ಲರ ಕರ್ತವ್ಯವಾಗಿದೆ. ಮಕ್ಕಳು ಈಗಿನಿಂದಲೇ ಕನ್ನಡ ಭಾಷೆಯಲ್ಲಿ ಮಾತನಾಡಬೇಕು.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಹಾಗೂ ಉದ್ಯೊಗಕ್ಕಾಗಿ ಇಂಗ್ಲಿಷ್ ಭಾಷೆ ಅನಿವಾರ್ಯವಾಗಿದೆ. ಜೊತೆಗೆ ಹಿಂದಿಯೂ ಬೇಕು. ಆದರೆ ಮಾತೃಭಾಷೆಯನ್ನು ಮಾತ್ರ ಮರೆಯಬಾರದು. ವಿದ್ಯಾವಂತರಾಗಿ ಸಮಾಜದಲ್ಲಿ ಮುಂದೆ ಬಂದು ಶಿಕ್ಷಕರು, ಶಿಕ್ಷಣ ನೀಡಿದ ಸಂಸ್ಥೆಗೆ ಕೀರ್ತಿ ತರುವಂತಾಗಬೇಕೆಂದು ಹೇಳಿದರು.
ಸನ್ಮಾನ ಹಾಗೂ ಬಹುಮಾನ ವಿತರಣೆ :: ಇದೇ ಸಂದರ್ಭದಲ್ಲಿ ಕುಡೆಕಲ್ ಸಂತೋಷ್, ಶ್ರುತಿಶ್ರಿ, ವಿದ್ಯಾಸಂಸ್ಥೆಯ ಮೇಲ್ವಿಚಾರಕ ಮುದ್ಯನ ಕಿಶನ್ ಅವರುಗಳನ್ನು ಸನ್ಮಾನಿಸಲಾಯಿತು. ಮಕ್ಕಳ ದಿನಾಚರಣೆ ಅಂವಾಗಿ ಏರ್ಪಡಿಸಲಾಗಿದ್ದ ವಿವಿಧ ಕ್ರಿಡಾಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಿದ್ದಾಪುರ ಬಿಜಿಎಸ್ ಸಂಸ್ಥೆಯ ಮೇಲ್ವಿಚಾರಕ ಮಂಜುನಾಥ್, ಶಾಲಾ ನಾಯಕ ಭವನ್ ಇದ್ದರು. ಶಾಲಾ ಮುಖ್ಯ ಶಿಕ್ಷಕಿ ಎಂ.ಬಿ.ಪುನಿತ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಪಿ.ಜಿ. ಸವಿತಾ ಸ್ವಾಗತಿಸಿದರೆ, ಶಿಕ್ಷಕಿಯರಾದ ಶ್ರುತಿ ಹಾಗೂ ಕೆ.ಆರ್.ಜೀವಿತಾ ನಿರೂಪಿಸಿದರು. ವಿದ್ಯಾರ್ಥಿನಿ ಪುನರ್ವಿ ಸ್ವಾಗತ ನೃತ್ಯ ಮಾಡಿದರೆ, ಶಿಕ್ಷಕಿ ಕೆ.ಎಸ್. ನಯನ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
Breaking News
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*
- *ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
- *ಅರ್ಚಕರ ಮೇಲೆ ಹಲ್ಲೆ : ಹೋರಾಟದ ಎಚ್ಚರಿಕೆ ನೀಡಿದ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಘಟಕ*
- *ಫೆ.7 ರ ಪಾದಯಾತ್ರೆಗೆ ಸಿಎನ್ಸಿ ಬೆಂಬಲ*
- *ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
- *ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಟ್ ಬಿಡುಗಡೆ*
- *ಕೊಡಗಿಗೆ ಸಚಿವ ಸ್ಥಾನ ನೀಡಲು ಒತ್ತಾಯ*
- *ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
- *ತಲಕಾವೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ : ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ : ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ*