ಮಡಿಕೇರಿ ಡಿ.1 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆಯು ವಿಕಲಚೇತನರಿಗಾಗಿ ವಿಕಲಚೇತನರೊಂದಿಗೆ ವಿಕಲಚೇತನರಿಂದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಂರಕ್ಷಿಸಲು ಮತ್ತು ಸಾಧಿಸಲು ಕಾರ್ಯ ಪ್ರವೃತ್ತರಾಗುವಿಕೆಯಲ್ಲಿ ಒಗ್ಗಟ್ಟು’ ಎಂಬ ಘೋಷವಾಕ್ಯದೊಂದಿಗೆ ಡಿ.3 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಸವಿತಾ, ಜಿಲ್ಲಾ ವಿಶೇಷಚೇತನರ ಸಂಘದ ಅಧ್ಯಕ್ಷರಾದ ಜೆ.ಎ.ಮಹೇಶ್ವರ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮೈಸೂರು ಡಿ.ಡಿ.ಆರ್.ಸಿ. ವಕೀಲರು ಹಾಗೂ ಸದಸ್ಯ ಕಾರ್ಯದರ್ಶಿ ಎಸ್.ಎಸ್.ವೈಧ್ಯನಾಥ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕೆ.ಜಿ.ವಿಮಲ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎ.ಎಂ.ಬಸವರಾಜು ಇತರರು ಪಾಲ್ಗೊಳ್ಳಲಿದ್ದಾರೆ.
ಸಭಾ ಕಾರ್ಯಕ್ರಮಕ್ಕೂ ಮೊದಲು ಡಿ.3 ರಂದು ಬೆಳಗ್ಗೆ 9.30 ಗಂಟೆಗೆ ನಗರಸಭೆಯಿಂದ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಕಾವೇರಿ ಕಲಾಕ್ಷೇತ್ರದವರೆಗೆ ವಿಕಲಚೇತನರ ಜಾಥಾ ನಡೆಯಲಿದೆ.
Breaking News
- *ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5 : ಕ್ರೀಡೆಯಿಂದ ದೈಹಿಕ, ಮಾನಸಿಕ ಸಧೃಡತೆ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*
- *ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
- *ಅರ್ಚಕರ ಮೇಲೆ ಹಲ್ಲೆ : ಹೋರಾಟದ ಎಚ್ಚರಿಕೆ ನೀಡಿದ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಘಟಕ*
- *ಫೆ.7 ರ ಪಾದಯಾತ್ರೆಗೆ ಸಿಎನ್ಸಿ ಬೆಂಬಲ*
- *ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
- *ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಟ್ ಬಿಡುಗಡೆ*
- *ಕೊಡಗಿಗೆ ಸಚಿವ ಸ್ಥಾನ ನೀಡಲು ಒತ್ತಾಯ*
- *ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
- *ತಲಕಾವೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*