ಮಡಿಕೇರಿ ಡಿ.1 : ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಕೊಡಗಿನ ಅಭಿವೃದ್ಧಿ ಮತ್ತು ಸಮಸ್ಯೆಗಳ ಬಗ್ಗೆ ಕಾಳಜಿ ತೋರುತ್ತಿಲ್ಲವೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯನ್ನು ಅನೇಕ ಸಮಸ್ಯೆಗಳು ಕಾಡುತ್ತಿದ್ದರು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾದರ್ಶನ ಕಾರ್ಯಕ್ರಮ ನಡೆಯಬೇಕೆನ್ನುವ ಸರ್ಕಾರದ ಆದೇಶಕ್ಕೂ ಬೆಲೆ ಇಲ್ಲದಾಗಿದೆ. ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕೂಡ ನಡೆಸುತ್ತಿಲ್ಲ ಎಂದು ಟೀಕಿಸಿದ್ದಾರೆ.
ಜಿಲ್ಲೆಯ ತಾಲ್ಲೂಕುಗಳನ್ನು ಬರ ಪೀಡಿತವೆಂದು ಘೋಷಿಸಲಾಗಿದೆ, ಆದರೆ ಕೃಷಿಕ ವರ್ಗಕ್ಕೆ ಬರ ಪರಿಹಾರ ತಲುಪಿಸುವ ಕಾಳಜಿ ತೋರುತ್ತಿಲ್ಲ. ಬೇಸಿಗೆಯಲ್ಲಿ ನೀರಿನ ಅಭಾವ ಎದುರಾದರೆ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಚಿಂತನೆ ನಡೆಸಿಲ್ಲ. ದಿನದಿಂದ ದಿನಕ್ಕೆ ವನ್ಯಜೀವಿಗಳ ದಾಳಿ ಮಿತಿ ಮೀರುತ್ತಿದೆ. ಕಾಡಾನೆಗಳ ದಾಳಿಯಿಂದ ಫಸಲು ನಷ್ಟವಾಗುತ್ತಿದೆ. ದಕ್ಷಿಣ ಕೊಡಗಿನಲ್ಲಿ ನಿತ್ಯ ಹುಲಿ ದಾಳಿಗೆ ಹಸುಗಳು ಬಲಿಯಾಗುತ್ತಿವೆ.
ಕಂದಾಯ ಇಲಾಖೆಯಲ್ಲಿ ಕಡತಗಳು ವಿಲೇವಾರಿಯಾಗುತ್ತಿಲ್ಲ. ರೈತಾಪಿ ವರ್ಗ ಕೃಷಿ ಕಾರ್ಯ ಬಿಟ್ಟು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಜಿ ಸೈನಿಕರ ಬೇಡಿಕೆಗಳನ್ನು ಈಡೇರಿಸುವ ಆಸಕ್ತಿ ತೋರುತ್ತಿಲ್ಲ. ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನಗರಸಭೆಯಲ್ಲಿ ಶೇ.50 ರಷ್ಟು ಹುದ್ದೆಗಳು ಖಾಲಿ ಬಿದ್ದಿವೆ. ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಅನುದಾನದ ಕೊರತೆಯಿಂದ ನಗರದ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದಿದ್ದರೂ ಕೊಡಗು ಜಿಲ್ಲೆಗೆ ಯಾವುದೇ ಪ್ರಯೋಜನವಾಗಿಲ್ಲ. ಕನಿಷ್ಠ ಉಸ್ತುವಾರಿ ಸಚಿವರು ಬಂದು ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸುವ ಪ್ರಯತ್ನವನ್ನಾದರು ಮಾಡಬಹುದಿತ್ತು. ಆದರೆ ಸಚಿವರು ಜಿಲ್ಲೆಯ ಬಗ್ಗೆ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರಕ್ಕೂ ಈಗಿನ ಕಾಂಗ್ರೆಸ್ ಸರ್ಕಾರಕ್ಕೂ ಯಾವುದೇ ವ್ಯತ್ಯಾಸವಿಲ್ಲವೆಂದು ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ.
ತಕ್ಷಣ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
Breaking News
- *ಮೈಸೂರು : ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ವಾರ ಭವಿಷ್ಯ: ಫೆ.3 ರಿಂದ 9ರ ವರೆಗೆ : ಯಾರ ಭವಿಷ್ಯ ಹೇಗಿದೆ…*
- *JOB OPPORTUNITY : TEACHER VACANCY*
- *ವಿರಾಜಪೇಟೆ ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರ ವಿಶೇಷ ಸಭೆ : ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ*
- *ವಿರಾಜಪೇಟೆಯಲ್ಲಿ ಪರಿಸರ ಜಾಗೃತಿ ಜಾಥಾ : ಸುಂದರ ಕೊಡಗು ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*
- *ಸುಂಟಿಕೊಪ್ಪ : ವಿವಿಧ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
- *ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ*
- *ಮರಗೋಡು ಕಾರ್ಯಕ್ಷೇತ್ರದಲ್ಲಿ ಕೃಷಿ ಪದ್ಧತಿಯ ಬಗ್ಗೆ ಮಾಹಿತಿ ಕಾರ್ಯಕ್ರಮ*
- *ಕಾಜೂರು ಕರ್ಣ ಕಾಡಾನೆ ಸೆರೆ : ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ, ಪರಿಶೀಲನೆ*
- *ಚೆನ್ನಯ್ಯನಕೋಟೆ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಗಮನಸೆಳೆದ ವಿದ್ಯಾರ್ಥಿಗಳ ನೃತ್ಯೋತ್ಸವ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*