ಮಡಿಕೇರಿ ಡಿ.2 : ಚಿಕ್ಕಮಗಳೂರಿನ ಯುವ ವಕೀಲ ಪ್ರೀತಂ ಅವರ ಮೇಲೆ ಚಿಕ್ಕಮಗಳೂರಿನ ಪೊಲೀಸ್ ಸಿಬ್ಬಂದಿಗಳು ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಘಟನೆಯನ್ನು ಖಂಡಿಸಿ ಮಡಿಕೇರಿ ವಕೀಲರ ಸಂಘ ಪ್ರತಿಭಟನೆ ನಡೆಸಿತು.
ರಾಜ್ಯಾದ್ಯಂತ ಹಿರಿಯ ಹಾಗೂ ಕಿರಿಯ ವಕೀಲರು ಹಲ್ಲೆಯನ್ನು ಖಂಡಿಸಿ ನ್ಯಾಯಾಲಯದ ಕಲಾಪಗಳಿಂದ ಸ್ವಯಂ ಪ್ರೇರಿತವಾಗಿ ಹೊರ ಉಳಿದು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಮಡಿಕೇರಿಯಲ್ಲೂ ಬೆಂಬಲ ವ್ಯಕ್ತವಾಯಿತು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ಯುವ ವಕೀಲರ ಮೇಲೆ ನಡೆದ ಹಲ್ಲೆ ಖಂಡನೀಯ, ವಕೀಲರು ಸಮಾಜದ ಅಭಿರಕ್ಷಕರು, ಇವರನ್ನೇ ಪೊಲೀಸ್ ಇಲಾಖೆಯವರು ಹೀಗೆ ನಡೆಸಿಕೊಂಡರೆ, ಇನ್ನು ಸಾಮಾನ್ಯ ಜನರ ಗತಿ ಏನು ಎಂದು ಪ್ರಶ್ನಿಸಿದರು. ಪ್ರಕರಣ ದಾಖಲಾದರು ಕೂಡ ಆರೋಪಿಗಳನ್ನು ಬಂಧಿಸದೆ ಇರುವುದು ಸರಿಯಲ್ಲ. ಘಟನೆಯ ಗಂಭೀರತೆ ಅರಿತ ರಾಜ್ಯ ಸರ್ಕಾರ ಆರೋಪಿಗಳನ್ನು ಸೇವೆಯಿಂದ ಅಮಾನತು ಮಾಡಿದೆ.
ಆದರೆ ಇನ್ನೂ ಕೂಡ ಅರೋಪಿಗಳ ಬಂಧನವಾಗಿಲ್ಲ, ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎನ್ನುವುದು ರಾಜ್ಯದ ವಕೀಲರ ಆಗ್ರಹವಾಗಿದೆ ಎಂದು ನಿರಂಜನ್ ತಿಳಿಸಿದರು.
Breaking News
- *ಮಡಿಕೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ : ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರ ಕೊಡುಗೆ ಅಪಾರ : ಬಿ.ಸಿ.ಶಂಕರಯ್ಯ*
- *ವಿರಾಜಪೇಟೆ : ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು : ಅನೂಪ್ ಮಾದಪ್ಪ ಕರೆ*
- *ದೀಪ್ತಿ ದೇಚಮ್ಮ ಗೆ ಪಿ.ಹೆಚ್.ಡಿ ಪದವಿ ಪ್ರದಾನ*
- *ಜನಪರ ಮತ್ತು ರೈತಪರ ಬಜೆಟ್ : ತೇಲಪಂಡ ಶಿವಕುಮಾರ್ ನಾಣಯ್ಯ*
- *ರಾಜ್ಯದ ಹಿತಕ್ಕೆ ನಿರಾಶದಾಯಕ ಬಜೆಟ್ : ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ*
- *ಮುಖ್ಯಮಂತ್ರಿಗಳ ಕೊಡಗು ಭೇಟಿ ನಿರಾಶಾದಾಯಕ*
- *ಕೊಡಗು : ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*
- *ವಿವೇಕಾನಂದ ಪಿಯು ಕಾಲೇಜಿನಲ್ಲಿ ವೆಲ್ ಫೇರ್ ಡೇ : ಪುಸ್ತಕ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ : ಡಾ.ದೇವರಾಜು ಸಲಹೆ*
- *ವಿರಾಜಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಯುವ ಸಮಾವೇಶ : ವಿವೇಕಾನಂದ-ಸುಭಾಷ್ ಚಂದ್ರ ಬೋಸ್ ಯುವ ಸಮುದಾಯದ ಪ್ರೇರಣಾ ಶಕ್ತಿಗಳು : ಶ್ರೀಶಾ*
- *ಮೈಸೂರು : ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*