ಸುಂಟಿಕೊಪ್ಪ ಡಿ.3 : ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ 3 ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಜಯ ದಾಖಲಿಸಿದ ಹಿನ್ನೆಲೆ ಕೊಡಗು ಜಿಲ್ಲೆಯ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಮಡಿಕೇರಿ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಜಯಘೋಷಗಳೊಂದಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರಿಗೆ ಜಯಕಾರ ಹಾಕಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿದರು.
ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಕೆದಕಲ್ ಗ್ರಾ.ಪಂ ಅಧ್ಯಕ್ಷ ಆನಂದ, ಪಂಚಾಯಿತಿ ಸದಸ್ಯ ಬಿ.ಎಂ.ಸುರೇಶ್, ಸುಂಟಿಕೊಪ್ಪ ಶಕ್ತಿ ಕೇಂದ್ರದ ಅಧ್ಯಕ್ಷ ಬಿ.ಕೆ.ಪ್ರಶಾಂತ್, ವಿಶ್ವ ಹಿಂದೂ ಪರಿಷದ್ ಮಾಜಿ ಕಾರ್ಯದರ್ಶಿ ಡಿ.ನರಸಿಂಹ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.










