ಮಡಿಕೇರಿ ಡಿ.3 : ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಪುತ್ರಿಯರ ಶವ ಪತ್ತೆಯಾಗಿದೆ.
ಸ್ಥಳೀಯ ನಿವಾಸಿ ಅಶ್ವಿನಿ (48), ಇವರ ಪುತ್ರಿಯರಾದ ಗೋಣಿಕೊಪ್ಪಲು ಕಾವೇರಿ ಕಾಲೇಜು ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ನಿಕಿತಾ(21) ಹಾಗೂ ಕಂಪ್ಯೂಟರ್ ತರಬೇತಿ ಪಡೆಯುತ್ತಿರುವ ಆಕೆಯ ತಂಗಿ ನವ್ಯ(18) ಮೃತ ದುರ್ದೈವಿಗಳು.
ಹುದಿಕೇರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮೂವರು ಐಗುಂದದಲ್ಲಿರುವ ತಮ್ಮ ಕಾಫಿ ತೋಟಕ್ಕೆ ಶನಿವಾರ ತೆರಳಿದ್ದರು. ಆದರೆ ರಾತ್ರಿಯಾದರೂ ಮರಳಿರಲಿಲ್ಲ ಎಂದು ಹೇಳಲಾಗಿದೆ. ಇಂದು ಮೂವರ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.










