ನಾಪೋಕ್ಲು ನ.4 : ನಾಪೋಕ್ಲು ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಭಕ್ತ ಕನಕದಾಸರ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಸಮೀಪದ ಕಕ್ಕಬ್ಬೆಯ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು, ಶಿಕ್ಷಕಿ ಕವಿತಾ ಮಾತನಾಡಿ ದಾಸರಲ್ಲಿಯೇ ಕನಕದಾಸರು ಅತ್ಯಂತ ಶ್ರೇಷ್ಠರು. ಉಳಿದ ಸಮುದಾಯಕ್ಕೆ ಮಾರ್ಗದರ್ಶಕರಾಗಿದ್ದರು. ಇಂತಹ ಸಂತರ ಜೀವನ ಆದರ್ಶ ತತ್ವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಕನಕದಾಸರ ಕೀರ್ತನೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಪಾಲ್ಗೊಂಡಿದ್ದರು
ವರದಿ : ದುಗ್ಗಳ ಸದಾನಂದ









