ಮೂರ್ನಾಡು ಡಿ.4 : ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭವು ಡಿ.6ರಂದು ನಡೆಯಲಿದೆ.
ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಅಪರಾಹ್ನ1.30ಕ್ಕೆ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿಚೀಯಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜ ಪಾಲ್ಗೊಳ್ಳಲಿದ್ದಾರೆ.
ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ವರದಿ : ಟಿ.ಸಿ.ನಾಗರಾಜ್, ಮೂರ್ನಾಡು.








