ಮಡಿಕೇರಿ ಡಿ.5 : ಕುಂಜಿಲ ಯೂತ್ ಕ್ಲಬ್ ವತಿಯಿಂದ ಡಿ.14 ರಿಂದ 17 ರವರೆಗೆ “ನಾಲ್ಕುನಾಡು ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾವಳಿಯು ನಾಪೋಕ್ಲುವಿನಲ್ಲಿ ನಡೆಯಲಿದೆ ಎಂದು ಕುಂಜಿಲ ಗ್ರಾ.ಪಂ ಮಾಜಿ ಅಧ್ಯಕ್ಷ ವೈ.ಕೆ.ಹಂಸ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 21 ಗ್ರಾಮ ಪಂಚಾಯಿತಿಗಳಿಗೆ ಒಳಪಟ್ಟ ನಾಲ್ಕುನಾಡಿನ ಪಂದ್ಯಾವಳಿ ಇದಾಗಿದ್ದು, ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಮೈದಾನದಲ್ಲಿ 10 ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ ಎಂದರು. 7 ಓವರ್ ಗಳ ಪಂದ್ಯಾವಳಿ ಲೀಗ್ ಮಾದರಿಯಲ್ಲಿ ನಡೆಯಲಿದೆ. ಡಿ.14ರಂದು ಬೆಳಗ್ಗೆ 8 ಗಂಟೆಗೆ ಕುಂಜಿಲ ಪೈನರಿ ಜಮಾಅತ್ ಅಧ್ಯಕ್ಷ ಶೌಕತ್ ಆಲಿ ಪಂದ್ಯಾವಳಿಯನ್ನು ಉದ್ಘಾಟಿಲಿಸಲಿದ್ದು, ಅತಿಥಿಗಳಾಗಿ ನಿವೃತ್ತ ಶಿಕ್ಷಕಿ ರೇಖಾ ಹಾಗೂ ಕ್ಲಬ್‌ನ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಡಿ.17ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕುಂಜಿಲ ಪೈನರಿ ಜಮಾಅತ್ ಅಧ್ಯಕ್ಷ ಶೌಕತ್ ಆಲಿ, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್‌ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಎ.ಎ.ಹಂಸ, ಇಸ್ಮಾಯಿಲ್, ನಾಸೀರ್ ಮಕ್ಕಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕ್ಲಬ್ ನ ಅಧ್ಯಕ್ಷ ಎಂ.ಎಂ.ಮುಸ್ತಫ ಹಾಗೂ ಕಾರ್ಯದರ್ಶಿ ಶರೀಫ್ ಉಪಸ್ಥಿತರಿದ್ದರು.









