ಮಡಿಕೇರಿ ಡಿ.4 : ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗವನ್ನು ಜಿಲ್ಲೆಯಲ್ಲಿ ಮತ್ತಷ್ಟು ಸಂಘಟಿಸುವ ಉದ್ದೇಶದಿಂದ ಕೊಡಗಿನ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಪಿ.ಎ.ಹನೀಫ್ ತಿಳಿಸಿದರು.
ಮಡಿಕೇರಿ ಬ್ಲಾಕ್‍ಗೆ ಕೆ.ಜಿ.ಪೀಟರ್, ವಿರಾಜಪೇಟೆ ಬ್ಲಾಕ್‍ಗೆ ಕೋಳುಮಂಡ ರಫೀಕ್, ಪೊನ್ನಂಪೇಟೆ ಬ್ಲಾಕ್‍ಗೆ ಎಂ.ಎ.ಶಮೀರ್, ಕುಶಾಲನಗರ ಬ್ಲಾಕ್‍ಗೆ ಕೆ.ಇ.ಅಬ್ದುಲ್ ರಜಾಕ್, ನಾಪೋಕ್ಲು ಬ್ಲಾಕ್‍ಗೆ ಎ.ಎಂ.ಉಮ್ಮರ್, ಸೋಮವಾರಪೇಟೆ ಬ್ಲಾಕ್‍ಗೆ ಅಕ್ಮಲ್ ಪಾಷ ಅವರನ್ನು ನೇಮಿಸಲಾಗಿದೆ. ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರ ನಿರ್ದೇಶನದಂತೆ, ಜಿಲ್ಲೆಯ ಇಬ್ಬರು ಶಾಸಕರು ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಈ ನೇಮಕಾತಿ ಅಂತಿಮಗೊಳಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪದಾಧಿಕಾರಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.









