ಮಡಿಕೇರಿ ಡಿ.4 : ನೀರು ಗಂಟಿಯೊಬ್ಬರ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ಮಡಿಕೇರಿ ನಗರಸಭೆಯ ಸದಸ್ಯ ಉಮೇಶ್ ಸುಬ್ರಮಣಿ ಅವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ.3ರ ರಾತ್ರಿ ಈ ಘಟನೆ ನಡೆದಿದ್ದು, ನೀರು ಗಂಟಿ ಅನಿಲ್ ಕುಮಾರ್ ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇವರು ನೀಡಿರುವ ದೂರಿನ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮದುವೆ ಮನೆಯೊಂದರ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಮೇಶ್ ಸುಬ್ರಮಣಿ ಅವರು ನನ್ನ ಹಣೆಗೆ ಹಲ್ಲೆ ಮಾಡಿದಲ್ಲದೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.











