ಮಡಿಕೇರಿ ಡಿ.5 : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವಿಗೀಡಾದ ಸಂಗತಿ ತಿಳಿದು ದುಃಖವಾಗಿದೆ. ಒಂದು ಕಾಲದಲ್ಲಿ ಮೈಸೂರು ದಸರಾದ ಕೇಂದ್ರಬಿಂದುವಾಗಿದ್ದ ಅರ್ಜುನ ನಮ್ಮೆಲ್ಲರ ಹೃದಯದಲ್ಲಿ ಮರೆಯಲಾರದ ನೆನಪುಗಳನ್ನು ಬಿಟ್ಟುಹೋಗಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.








