ಬೆಂಗಳೂರು ಡಿ.5 : ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೂ. 50 ರೂ ಪರಿಹಾರ ಧನ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅವರಿಗೆ ನಮನ ಸಲ್ಲಿಸಿದ ಸಂದರ್ಭದಲ್ಲಿ 50 ಲಕ್ಷ ರಾಜ್ಯ ಸರ್ಕಾರದ ಪರಿಹಾರ ಧನ ಘೋಷಣೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಿದ್ದರಾಮಯ್ಯ ಅವರು, ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ.
ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು.
ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದರು.