ಮಡಿಕೇರಿ ಡಿ.5 : ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುತ್ತಾರ್ಮುಡಿ- ಮೂರ್ನಾಡು ರಸ್ತೆಯಲ್ಲಿ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಎಮ್ಮೆಮಾಡು ಗ್ರಾಮದ ನಿವಾಸಿ ಇಬ್ರಾಹಿಂ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮೂರ್ನಾಡು ಕಡೆಯಿಂದ ಮಡಿಕೇರಿಗೆ ಬರುತ್ತಿದ್ದ ಕಾರು ಹಾಗೂ ಮಡಿಕೇರಿ ಕಡೆಯಿಂದ ಮೂರ್ನಾಡು ಮಾರ್ಗವಾಗಿ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ಸಿನ ನಡುವೆ ಅಪಘಾತ ಸಂಭವಿಸಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.









