ಕುಶಾಲನಗರ ಡಿ.5 : ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ‘ ವಚನ ಗಾಯನ ಕಾರ್ಯಕ್ರಮ ‘ ವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ.
ಆಸಕ್ತ ವಿದ್ಯಾರ್ಥಿಗಳು ವಚನ ಕಾರ್ಯಕ್ರಮದ ಸಂಚಾಲಕ ಕೆ.ಆರ್. ರಮೇಶ್, ಶಿಕ್ಷಕರು 78921 27188 ಇವರ ಬಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಮಹಾತ್ಮ ಗಾಂಧಿ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕರೂ ಆದ ವಚನ ಸಾಹಿತ್ಯ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜೇಶ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.









