ಬೆಳಗಾವಿ ಡಿ.5 : ಕಾಡಾನೆ ಹಾವಳಿ ನಿಯಂತ್ರಣ ಸಂಬಂಧ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರ ಉಪಸ್ಥಿತಿಯಲ್ಲಿ ಬೆಳಗಾವಿಯ ಸುವರ್ಣಸೌಧದ ಅರಣ್ಯ ಸಚಿವರ ಕೊಠಡಿ ಸಭಾಂಗಣದಲ್ಲಿ ಸಭೆ ನಡೆಯಿತು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಪಾಲ್ಗೊಂಡಿದ್ದರು. ಕಾಡಾನೆ ಹಾವಳಿ ನಿಯಂತ್ರಣ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಿದರು.










