ಮಡಿಕೇರಿ ಡಿ.5 : ಪೊನ್ನಂಪೇಟೆಯ ಸರ್ವದೈವತಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಬಿ.ಎಸ್.ಸೃಷ್ಟಿ ಪ್ರಥಮ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ.
ಈ ಸಂದರ್ಭದಲ್ಲಿ ಶಾಲಾ ಸಂಯೋಜಕರಾದ ಅಮೃತ, ದೈಹಿಕ ಶಿಕ್ಷಕಿ ಮೋನಿಕಾ ಕಾವೇರಿ ಉಪಸ್ಥಿತರಿದ್ದರು.
ವಿಜೇತ ವಿದ್ಯಾರ್ಥಿನಿಯನ್ನು ಶಾಲಾ ಆಡಳಿತ ಮಂಡಳಿ, ಶಾಲಾ ಸಂಯೋಜಕರು, ಶಿಕ್ಷಕ ವೃಂದದವರು ಶ್ಲಾಘಿಸಿ, ಅಭಿನಂದಿಸಿದರು.









