ಸೋಮವಾರಪೇಟೆ, ಡಿ.5: ಶಿಕ್ಷಕರ ಹುದ್ದೆ ಕೇವಲ ವೃತ್ತಿ ಅಲ್ಲ, ಅದೊಂದು ಶ್ರೇಷ್ಠ ಸೇವೆ. ಈ ದಿಸೆಯಲ್ಲಿ ಶಿಕ್ಷಕರು
ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ಸೋಮವಾರಪೇಟೆ ತಾಲ್ಲೂಕು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಹೇಳಿದರು.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರ( ಬಿ.ಆರ್.ಸಿ.)ದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಹುದ್ದೆಯಿಂದ ಮುಂಬಡ್ತಿ ಹೊಂದಿ ತಾಲ್ಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಛೇರಿಯ ಸಿಬ್ಬಂದಿಯೊಂದಿಗೆ ಶೈಕ್ಷಣಿಕ ಹಾಗೂ ಆಡಳಿತ ವ್ಯವಸ್ಥೆ ಕುರಿತು ಸಮಾಲೋಚನೆ ನಡೆಸಿ ಶೈಕ್ಷಣಿಕ ಪ್ರಗತಿ ಕುರಿತು ಚರ್ಚಿಸಿ ಮಾತನಾಡಿದರು.
ನೂತನ ಬಿಇಓ ಭಾಗ್ಯಮ್ಮ ಅವರು, ಪ್ರಭಾರ ಬಿಇಓ ಎಂ.ವಿ.ಮಂಜೇಶ್ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಶಾಲೆಯ ಪ್ರಗತಿಯೊಂದಿಗೆ ವೃತ್ತಿ ಬದ್ಧತೆ ತೋರುತ್ತಿರುವುದು ಶ್ಲಾಘನೀಯ ಎಂದರು.
ಪ್ರತಿಯೊಬ್ಬ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮುಖ್ಯ. ಇದರಿಂದ ಶಿಕ್ಷಣದ ಪ್ರಗತಿ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.
ತಾವು ಶಿಕ್ಷಕರೊಂದಿಗೆ ಶಿಕ್ಷಕರ ಸ್ನೇಹಿಯಾಗಿ ಸೇವೆ ಸಲ್ಲಿಸುವ ಮೂಲಕ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವುದಾಗಿ ಭಾಗ್ಯಮ್ಮ ಹೇಳಿದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಕೋಶಾಧಿಕಾರಿ ಎ.ಸಿ.ಮಂಜುನಾಥ್, ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರತ್ನಕುಮಾರ್, ಕಾರ್ಯದರ್ಶಿ ಟಿ.ವಿ.ಶೈಲಾ, ರಾಜ್ಯ ಪ್ರತಿನಿಧಿ ನವೀನ್, ಸಂಘದ ಪದಾಧಿಕಾರಿಗಳಾದ ಎಸ್.ನಾಗರಾಜ್, ಯಶವಂತ್, ಶ್ರೀಕಾಂತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ಮಾಜಿ ಅಧ್ಯಕ್ಷ ಎಸ್.ಎ.ಯೋಗೇಶ್, ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಕೆ.ಬಸವರಾಜ್, ಪದಾಧಿಕಾರಿಗಳಾದ ಎಲ್.ಎಂ.ಪ್ರೇಮ, ಉಮಾದೇವಿ, ಕವಿತ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಜಿ.ಎಂ.ಹೇಮಂತ್, ತಾಲ್ಲೂಕು ದೈಹಿಕ ಪರಿವೀಕ್ಷಕಿ ಎಂ.ಎಲ್.ಸುಕುಮಾರಿ, ಹಾಸನ ಡಯಟ್ ಸಂಸ್ಥೆಯ ಉಪನ್ಯಾಸಕ ಸಿ.ಕೃಷ್ಣೇಗೌಡ,
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ಕಾರ್ಯದರ್ಶಿ ಎನ್.ಎಂ.ನಾಗೇಶ್, ಮಾಜಿ ಅಧ್ಯಕ್ಷ ಪ್ರಸನ್ನ, ನಿರ್ದೇಶಕ ಶಿವಕುಮಾರ್, ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಸುರೇಶ್, ತಾಲ್ಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ. ಶಿವಶಂಕರ್, ಸಂಘದ ಗೌರವಾಧ್ಯಕ್ಷ ಎಚ್.ಪಿ.ಕರುಂಬಯ್ಯ,
ದೇವಾನಂದ್, ಸುರೇಶ್, ಸಂಘದ ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.











